HomeKarnatakaBIG NEWS: ಪ್ರಜ್ವಲ್ ರೇವಣ್ಣ ಬೆನ್ನಲ್ಲೇ ಹೆಚ್.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು; ಸಮನ್ಸ್ ಜಾರಿಗೆ ಆದೇಶ

BIG NEWS: ಪ್ರಜ್ವಲ್ ರೇವಣ್ಣ ಬೆನ್ನಲ್ಲೇ ಹೆಚ್.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು; ಸಮನ್ಸ್ ಜಾರಿಗೆ ಆದೇಶ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅಸಿಂಧು ಬೆನ್ನಲ್ಲೇ ಇದೀಗ ಶಾಸಕ ಹೆಚ್.ಡಿ.ರೇವಣ್ಣ ಸ್ಥಾನಕ್ಕೂ ಕುತ್ತು ಬಂದಿದ್ದು, ಹೈಕೋರ್ಟ್ ಸಮನ್ಸ್ ಜಾರಿಗೆ ಆದೇಶ ನೀಡಿದೆ.

ಪರಾಜಿತ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ, ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ ದೇವರಾಜೇಗೌಡ ವಿರುದ್ಧ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೂ ಸಮನ್ಸ್ ಜಾರಿ ಮಾಡುವಂತೆ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನಸಭೆ ಕಾರ್ಯದರ್ಶಿ ಮೂಲಕ ಸಮನ್ಸ್ ಜಾರಿ ಮಾಡಲು ಹೈಕೋರ್ಟ್ ಆದೇಶ ಹೊರಡಿಸಿದೆ. ಚುನಾವಣಾ ಅಕ್ರಮದ ಮೂಲಕ ಹೆಚ್.ಡಿ.ರೇವಣ್ಣ ಜಯಗಳಿಸಿದ್ದಾರೆ. 2ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಮತದಾರರಿಗೆ ಆಮಿಷವೊಡ್ಡಿದ್ದಾರೆ. ಹಾಗಾಗಿ ಇಬ್ಬರ ಮತಗಳಿಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ದೇವರಾಜೇಗೌಡ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular