alex Certify ಬರಪೀಡಿತ ತಾಲೂಕುಗಳ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬರಪೀಡಿತ ತಾಲೂಕುಗಳ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ

ಬೆಂಗಳೂರು: ಬರಪೀಡಿತ ತಾಲೂಕುಗಳ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದೆ.

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರ ಘೋಷಿಸುವ ಬರಪೀಡಿತ ತಾಲೂಕುಗಳ ಪಡಿತರ ಚೀಟಿದಾರರಿಗೆ ಪೂರ್ಣವಾಗಿ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಎಲ್ಲಾ ಜಿಲ್ಲೆಗಳಲ್ಲಿ 5 ಕೆಜಿ ಅಕ್ಕಿ, ಉಳಿದ 5 ಕೆಜಿ ಅಕ್ಕಿ ಬದಲಿಗೆ ಹಣವನ್ನು ಪಡಿತರ ಚೀಟಿದಾರರ ಖಾತೆಗೆ ಪಾವತಿಸಲಾಗುತ್ತಿದೆ. ತೀವ್ರ ಮಳೆ ಕೊರತೆಯಾಗಿರುವ 114 ತಾಲ್ಲೂಕುಗಳು ಬರ ವ್ಯಾಪ್ತಿಗೆ ಬರುವ ಸಾಧ್ಯತೆ ಇದ್ದು, ಈ ತಾಲೂಕುಗಳ ಎಲ್ಲಾ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ 5 ಕೆಜಿ ಹಣ ನೀಡುವ ಬದಲು ಸಂಪೂರ್ಣ 10 ಕೆಜಿ ಅಕ್ಕಿ ವಿತರಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...