ಬೆಂಗಳೂರು : ರಾಜ್ಯ ಶಿಕ್ಷಣ ನೀತಿ ಜಾರಿಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯ ಶಿಕ್ಷಣ ನೀತಿಗೆ ಪೂರಕವಾಗಿ ಜ್ಞಾನ ಆಯೋಗವನ್ನು ಪುನಾರಚನೆಗೆ ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ.
ಜ್ಞಾನ ಆಯೋಗವು ರಾಜ್ಯ ಶಿಕ್ಷಣ ನೀತಿ ರಚನೆ ಹಾಗೂ ಅನುಷ್ಠಾನ ಬಗ್ಗೆ ಶಿಕ್ಷಣ ಇಲಾಖೆಗೆ ಮಹತ್ವದ ಸಲಹೆ ಸೂಚನೆಗಳನ್ನು ನೀಡಲಿದೆ. ನೀತಿಯಲ್ಲಿರುವ ಅಂಶಗಳಿಗೆ ತಕ್ಕಂತೆ ಯೋಜನೆಗಳನ್ನು ರೂಪಿಸಿ ಕೊಡಲಿದೆ. ಲಕ್ಷಾಂತರ ವಿದ್ಯಾರ್ಥಿಗಳಿಗೆ ಮುಂದಿನ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಆಯೋಗವು ಸರ್ಕಾರಕ್ಕೆ ಸಲಹೆ, ಶಿಫಾರಸುಗಳನ್ನು ನೀಡಲಿದೆ.
ರಾಜ್ಯ ಸರ್ಕಾರವು ರಾಜ್ಯ ಶಿಕ್ಷಣ ನೀತಿ ಜಾರಿಗೆ ಸಿದ್ಧತೆ ನಡೆಸಿದ್ದು, ಜ್ಞಾನ ಆಯೋಗವು ಶಿಕ್ಷಣ, ಸಂಶೋಧನೆ, ಉದ್ಯಮ ಕ್ಷೇತ್ರದಲ್ಲಿ ಸಮಗ್ರ ಬದಲಾವಣೆಯನ್ನು ತರಲು ಪ್ರಯತ್ನಿಸುತ್ತಿದೆ ಎನ್ನಲಾಗಿದೆ.