ಮಹಿಳೆಯರಿಗೆ 2000 ರೂ ನೀಡುವ ‘ಗೃಹಲಕ್ಷ್ಮಿ’ ಯೋಜನೆಗೆ ಸರ್ಕಾರ ಚಾಲನೆ ನೀಡಿದೆ. ಈಗಾಗಲೇ ಮಹಿಳೆಯರ ಖಾತೆಗೆ 2000 ರೂ. ಹಣ ಜಮಾ ಆಗುತ್ತಿದೆ.
ಒಂದೇ ಬಾರಿಗೆ ಕೋಟ್ಯಾಂತರ ಮಹಿಳೆಯರಿಗೆ ಹಣ ಕಳುಹಿಸುತ್ತಿರುವುದರಿಂದ ಹಣ ಜಮಾ ಆಗಿರುವುದಿಲ್ಲ . ಅಥವಾ ನಿಮ್ಮ ರೇಷನ್ ಕಾರ್ಡ್ ಸಮಸ್ಯೆಯಿಂದ ಹಣ ಜಮಾ ಆಗಿರುವುದಿಲ್ಲ. ಆದ್ದರಿಂದ ತಪ್ಪದೇ ಈ ಕೆಲಸಗಳನ್ನು ಮಾಡಿ.
1) ಹತ್ತಿರದಲ್ಲಿರುವ ಯಾವುದೇ ಸೇವಾಕೇಂದ್ರ ಅಥವಾ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ದಾಖಲೆಯನ್ನು ಕೊಟ್ಟು ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಿ
2) ನಿಮ್ಮ ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿದೆಯೇ ಎನ್ನುವುದನ್ನು ತಿಳಿದುಕೊಳ್ಳಿ. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಡೇಟ್ ಮಾಡಿಸಿಕೊಳ್ಳಿ.
3) ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಮಾಹಿತಿಯಲ್ಲಿ ತಿದ್ದುಪಡಿ, ತೊಂದರೆ ಇದ್ದರೆ ಸರಿ ಮಾಡಿಸಿ ಆಧಾರ್ ಕಾರ್ಡ್ ಲಿಂಕ್, NPCI ಮ್ಯಾಪಿಂಗ್ ಮಾಡಿಸಿದರೆ ಅವರು ಮುಂದಿನ ತಿಂಗಳಿನಿಂದ 2000 ರೂ ಪಡೆಯಬಹುದು.
4) ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ NPCI ಮ್ಯಾಪಿಂಗ್ ಆಗಿದೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಿ , ಇಲ್ಲವಾದಲ್ಲಿ ನಿಮ್ಮ ಬ್ಯಾಂಕ್ ಶಾಖೆಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಿ.
5) ನಿಮ್ಮ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಅಕೌಂಟ್ ನಲ್ಲಿರುವ ಮಾಹಿತಿ ಹೊಂದಾಣಿಕೆ ಆಗಿದೆಯೇ ಎನ್ನುವುದನ್ನು ದೃಢಪಡಿಸಿಕೊಳ್ಳಿ, ಇಲ್ಲವಾದಲ್ಲಿ ಇದನ್ನು ತಿದ್ದುಪಡಿ ಕೂಡ ಮಾಡಿಸಬೇಕು.
ಇದುವರೆಗೆ ಅರ್ಜಿ ಸಲ್ಲಿಸದವರು ಹಾಗೂ ತಾಂತ್ರಿಕ ತೊಂದರೆಯಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇರುವವರು ಎಲ್ಲವನ್ನು ಸರಿಮಾಡಿಕೊಂಡು ಅರ್ಜಿ ಸಲ್ಲಿಸಿದರೆ ಸೆಪ್ಟೆಂಬರ್ ನಿಂದ ಹಣ ಪಡೆಯಬಹುದು.