ಶಿವಮೊಗ್ಗ : ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ನಾಳೆ ಸೆ.6 ರಂದು ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧಿಸಲಾಗಿದೆ.
ಸೆ.6 ರಂದು ನಾಳೆ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟ ಮಾಡುವ ಮಾಲೀಕರು ತಮ್ಮ ಅಂಗಡಿಗಳನ್ನುಬಂದ್ ಮಾಡಿ ಸಹಕರಿಸಲು ಕೋರಿದ್ದಾರೆ. ಒಂದು ವೇಳೆ ಆದೇಶ ಉಲ್ಲಂಘಿಸಿದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.