ಪ್ರೀತಮ್ ಗುಬ್ಬಿ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಾನ ದಾರಿಯಲ್ಲಿ ಸಿನಿಮಾ ಇದೇ ಸೆಪ್ಟೆಂಬರ್ 28 ರಂದು ರಾಜ್ಯದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆ ಕಾಣುತ್ತಿದ್ದು, ಸಿನಿ ಪ್ರೇಕ್ಷಕರು ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.
ಇಂದು ಚಿತ್ರತಂಡ ಟ್ರೈಲರ್ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಈ ಟ್ರೈಲರ್ ಬಿಡುಗಡೆ ಮಾಡಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದು ಭರ್ಜರಿಯಾಗಿ ಮುನ್ನುಗ್ಗುತ್ತಿದೆ.
ಗೋಲ್ಡನ್ ಸ್ಟಾರ್ ಗಣೇಶ್ ಪ್ರಪ್ರಥಮ ಬಾರಿಗೆ ಈ ಚಿತ್ರದಲ್ಲಿ ಕ್ರಿಕೆಟ್ ಆಟಗಾರನಾಗಿ ಅಭಿನಯಿಸಿದ್ದು, ರೀಷ್ಮಾ ನಾಣಯ್ಯ ಮತ್ತು ರುಕ್ಮಿಣಿ ವಸಂತ್ ಜೋಡಿಯಾಗಿದ್ದಾರೆ. ಅಭಿಲಾಶ್ ಕಲ್ಲತ್ತಿ ಛಾಯಾಗ್ರಹಣವಿದ್ದು, ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆ ಇದೆ. ವಾರೆ ಟಾಕೀಸ್ ಬ್ಯಾನರ್ ನಡಿ ಈ ಸಿನೆಮಾ ನಿರ್ಮಾಣ ಮಾಡಲಾಗಿದೆ.