alex Certify BIGG NEWS : ಇಂದು ಕಾವೇರಿ ನೀರು ವಿಚಾರಣೆ : ಸುಪ್ರೀಂಕೋರ್ಟ್ ನತ್ತ ರೈತರ ಚಿತ್ತ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಇಂದು ಕಾವೇರಿ ನೀರು ವಿಚಾರಣೆ : ಸುಪ್ರೀಂಕೋರ್ಟ್ ನತ್ತ ರೈತರ ಚಿತ್ತ!

ನವದೆಹಲಿ : ಕಾವೇರಿ ನೀರಿನ ವಿವಾದದ ಕುರಿತಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದ್ದು, ರೈತರ ಚಿತ್ತ ಸುಪ್ರೀಂಕೋರ್ಟ್ ನತ್ತ ನೆಟ್ಟಿದೆ.

ಕರ್ನಾಟಕ ಕಾವೇರಿ‌ ನೀರನ್ನು ಸಮರ್ಪಕವಾಗಿ ಹರಿಸುತ್ತಿಲ್ಲ ಎಂದು ಆರೋಪಿಸಿ ತಮಿಳುನಾಡು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಈ ಅರ್ಜಿ ವಿಚಾರಣೆಯನ್ನ ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳಲಿದೆ. ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ.

ಈ ಬಾರಿ ಕಾವೇರಿ ಕಣಿವೆ ಪ್ರದೇಶದಲ್ಲಿ ಶೇ 57 ರಷ್ಟು ಮಳೆ ಕೊರತೆಯಾಗಿದೆ. ಕುಡಿಯುವ ನೀರಿಗೂ ಸಮಸ್ಯೆಯಾಗಲಿದೆ. ಇದರಿಂದ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಕಷ್ಟವಾಗಲಿದೆ ಎಂದು ವಾದ ಮಾಡಲು ಕರ್ನಾಟಕ ಸರ್ಕಾರವು ಸಿದ್ದತೆ ನಡೆಸಿದೆ.

ಈ ಹಿಂದೆ ಸೆಪ್ಟೆಂಬರ್‌ 8 ವಿಚಾರಣೆ ನಿಗದಿಯಾಗಿತ್ತು. ಬಳಿಕ ಬುಧವಾರಕ್ಕೆ ನಿಗದಿ ಮಾಡಲಾಗಿದೆ. 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಕರ್ನಾಟಕ ಪ್ರಶ್ನೆ ಮಾಡಿ ತಕರಾರು ಅರ್ಜಿಯನ್ನು ಸಲ್ಲಿಸಿದೆ. ಈ ಬಗ್ಗೆ ಈಗಾಗಲೇ ಮರು ಪರಿಶೀಲನೆ ಅರ್ಜಿಯೊಂದನ್ನು ಪ್ರಾಧಿಕಾರಕ್ಕೆ ಸಲ್ಲಿಸಿದೆ. ಈ ಅಂಶವನ್ನು ಕೋರ್ಟ್ ಗಮನಕ್ಕೆ ಕರ್ನಾಟಕ ತರಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...