
ರಸ್ತೆಯಲ್ಲಿ ಅಜ್ಜಿ ಜೊತೆ ಹೋಗುತ್ತಿದ್ದ ಬಾಲಕನ ಮೇಲೆ ಟ್ರ್ಯಾಕ್ಟರ್ ಹರಿದಿದ್ದು, ಚಿಕಿತ್ಸೆ ಫಲಿಸದೇ ಬಾಲಕ ಮೃತಪಟ್ಟಿದ್ದಾನೆ. ಜೊತೆಯಲ್ಲಿದ್ದ ಅಜ್ಜಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಈ ಘಟನೆ ನಡೆದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

