ಬೆಂಗಳೂರು : ಕಾಂಗ್ರೆಸ್ ನಿಂದ ನನಗೆ ಆಹ್ವಾನ ಇರುವುದು ನಿಜ ಆದ್ರೆ ನಾನು ಬಿಜೆಪಿ ಬಿಟ್ಟು ಹೋಗಲ್ಲ ಎಂದು ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಮನೆಗೆ ಭೇಟಿ ನೀಡಿದ್ದಾರೆ., ಈ ವಿಚಾರ ಹಲವು ಚರ್ಚೆಗೆ ಕಾರಣವಾಗಿದೆ. ಪೂರ್ಣಿಮಾ ಶ್ರೀನಿವಾಸ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಗುಸು ಗುಸು ಕೇಳಿಬರುತ್ತಿದೆ.
ಇದಕ್ಕೆ ಪ್ರತಿ ಕ್ರಿಯೆ ನೀಡಿ ಮಾತನಾಡಿದ ಪೂರ್ಣಿಮಾ ಶ್ರೀನಿವಾಸ್ ಬಿಜೆಪಿಯಲ್ಲಿ ನನಗೆ ಯಾವುದೇ ಅಸಮಾಧಾನವಿಲ್ಲ, ನಾನು ಬಿಜೆಪಿ ಬಿಡುವ ಯೋಚನೆ ಮಾಡಿಲ್ಲ. ಪಕ್ಷ ತೊರೆಯುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರೆ ಎಲ್ಲರಿಗೂ ಹೇಳಿಯೇ ಹೋಗ್ತೇನೆ. ಎಂದು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದ್ದಾರೆ.