ಕೋಲಾರ : ಕೋಲಾರ ಜಿಲ್ಲಾ ಕಾಂಗ್ರೆಸ್ ಮುಖಂಡರ ನಡುವೆ ಮುಸುಕಿನ ಗುದ್ದಾಟ ಸ್ಫೋಟಗೊಂಡಿದ್ದು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಎಮ್ ಎಲ್ ಸಿ ಅನಿಲ್ ಕುಮಾರ್ ರಾಜೀನಾಮೆ ನೀಡಿದ್ದಾರೆ.
ಹೌದು, ಕೋಲಾರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ MLC ಅನಿಲ್ ಕುಮಾರ್ ನಡುವೆ ಕೆಲವು ದಿನಗಳಿಂದ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಇದೀಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ MLC ಅನಿಲ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಎರಡು ತಿಂಗಳು ಬಾಕಿ ಇರುವಾಗಲೇ ಅನಿಲ್ ಕುಮಾರ್ ರಾಜೀನಾಮೆ ನೀಡಿದ್ದಾರೆ.