HomeKarnatakaGruha Lakshmi Scheme : 70 ಲಕ್ಷ ಮಹಿಳೆಯರ ಖಾತೆಗೆ ಇನ್ನೂ ಜಮಾ ಆಗಿಲ್ಲ `ಗೃಹಲಕ್ಷ್ಮೀ’...

Gruha Lakshmi Scheme : 70 ಲಕ್ಷ ಮಹಿಳೆಯರ ಖಾತೆಗೆ ಇನ್ನೂ ಜಮಾ ಆಗಿಲ್ಲ `ಗೃಹಲಕ್ಷ್ಮೀ’ ಹಣ!

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಮಹಿಳೆಯರಿಗೆ 2,000 ರೂಪಾಯಿ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದ 70 ಲಕ್ಷ ಮಹಿಳೆಯರ ಖಾತೆಗೆ ಇನ್ನು ಹಣ ಜಮಾ ಆಗಿಲ್ಲ ಎನ್ನಲಾಗಿದೆ.

ಆಗಸ್ಟ್ 30 ರಂದು ಮೈಸೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗೃಹಲಕ್ಷ್ಮೀ ಯೋಜನೆಗೆ ಅಧಿಕೃತ ಚಾಲನೆ ನೀಡಿದ್ದು, ಈವರೆಗೆ 44.52 ಲಕ್ಷ ಫಲಾನುಭವಿಗಳ ಖಾತೆಗೆ ಮಾತ್ರ 2,000 ರೂ.ಹಣ ಜಮಾ ಆಗಿದ್ದು, ಇನ್ನೂ 69.05 ಲಕ್ಷ ಫಲಾನುಭವಿಗಳ ಖಾತೆಗೆ ಹಣ ಸೇರಿಲ್ಲ. ಶೀಘ್ರವೇ ಇವರಿಗೂ ಹಣ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದು, ಆಧಾರ್, ಬ್ಯಾಂಕ್ ಕೆವೈಸಿ ಮಾಡದೇ ಇರುವವರಿಗೆ ಈ ತಿಂಗಳೂ ಹಣ ವರ್ಗಾವಣೆ ಮಾಡುವುದು ಅನುಮಾನ ಎನ್ನಲಾಗಿದ್ದು, ಕೂಡಲೇ ಫಲಾನುಭವಿಗಳು ಈ ಕೆಲಸಗಳನ್ನು ಸಂಪೂರ್ಣ ಮಾಡಿ ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು ಎನ್ನಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular