ಬಳ್ಳಾರಿ : ರಾಜ್ಯ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದಾಗಿ ಕರ್ನಾಟಕ ರಾಜ್ಯವು ಇಂದು ಕತ್ತಲೆಯಲ್ಲಿ ಮುಳುಗಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯಕ್ಕೆ ಪ್ರತಿದಿನ 18,000 ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದ್ದರೂ, ಉತ್ಪಾದನೆ ಕಡಿಮೆಯಾಗಿದೆ. ಬಿಜಾಪುರ ಮತ್ತು ರಾಯಚೂರಿನ ವಿದ್ಯುತ್ ಉತ್ಪಾದನಾ ಘಟಕಗಳನ್ನು ಮುಚ್ಚಲಾಗಿದೆ. ನಗರ ಪ್ರದೇಶಗಳಲ್ಲಿ ಲೋಡ್ ಶೆಡ್ಡಿಂಗ್ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಉಚಿತ ವಿದ್ಯುತ್ ಇಲ್ಲದಿರುವುದಕ್ಕೆ ಮಾಜಿ ಸಚಿವ ಶ್ರೀರಾಮುಲು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಉಚಿತ ಯೋಜನೆ ಮೂಲಕ ಅಧಿಕಾರಕ್ಕೆ ಬಂದವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ. ರಾಜ್ಯದಲ್ಲಿ ಬರಗಾಲವಿದ್ದು, ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಸಹ ಸಿಗುತ್ತಿಲ್ಲ. ಬೆಳೆಗಳು ಒಣಗುತ್ತಿವೆ ಮತ್ತು 42 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಗೆ ಹಣ ನೀಡುವುದನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ ಮತ್ತು ರೈತ ಸಂಘಟನೆಗಳು ಅದಕ್ಕಾಗಿ ಹೋರಾಡಬೇಕು ಎಂದು ಅವರು ಹೇಳಿದರು.