ಬೆಂಗಳೂರು : ಶೀಘ್ರದಲ್ಲೇ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಬಿ,ಎಸ್ ಯಡಿಯೂರಪ್ಪ ವಿಪಕ್ಷ ನಾಯಕರು ಇಲ್ಲ ಅಂತ ನಾವು ನಮ್ಮ ಕೆಲಸ ಮಾಡೋದು ನಿಲ್ಲಿಸಿಲ್ಲ, ಶೀಘ್ರದಲ್ಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇವೆ, . ಯಡಿಯೂರಪ್ಪ ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 22-23 ಸೀಟು ಗೆಲ್ಲಿಸುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.