ಬೆಂಗಳೂರು : ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು, ಇದರ ಗಡುವು ನಾಳೆ ಸೆ.9 ಕ್ಕೆ ಮುಕ್ತಾಯವಾಗಲಿದೆ.
ಹೌದು, ಸೆಪ್ಟೆಂಬರ್ 9 ರೊಳಗೆ ವಾಹನ ಸವಾರರು ರಿಯಾಯಿತಿ ದರದಲ್ಲಿ ದಂಡ ಕಟ್ಟಬಹುದಾಗಿದೆ. ಸಂಚಾರಿ ಪೊಲೀಸ್ ಇಲಾಖೆಯ ಇ-ಚಲನ್ನಲ್ಲಿ ಫೆಬ್ರವರಿ 11, 2023ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಈ ಅವಕಾಶ ನೀಡಲಾಗಿದೆ.
ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿ ಮಾಡಲು ಶೇ. 50 ರಿಯಾಯಿತಿಯೊಂದಿಗೆ ಸೆಪ್ಟೆಂಬರ್ 9 ರವರೆಗೆ ಮಾತ್ರ ಅವಕಾಶ ಇದ್ದು, ಸೆಪ್ಟೆಂಬರ್ 9 ರೊಳಗೆ ವಾಹನ ಸವಾರರು ರಿಯಾಯಿತಿ ದರದಲ್ಲಿ ದಂಡ ಕಟ್ಟಬಹುದಾಗಿದೆ.
ರಿಯಾಯಿತಿ ದರದಲ್ಲಿ ದಂಡ ಪಾವತಿಸುವ ಬಗ್ಗೆ ಇಲ್ಲಿದೆ ಮಾಹಿತಿ
1) ಕರ್ನಾಟಕ ರಾಜ್ಯ ಪೊಲೀಸ್ ಅಧಿಕೃತ ಮೊಬೈಲ್ ಅಪ್ಲಿಕೇಶನ್ ಮೂಲಕ ಪಾವತಿ ಮಾಡಬಹುದು.
2) ಪೇಟಿಎಂ ಅಪ್ಲಿಕೇಶನ್ ಮುಖಾಂತರವು ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ.
3) ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ವೆಬ್ ಸೈಟ್ ಗೆ ಲಾಗ್ ಇನ್ ಆಗಿ ವಾಹನದ ನೋಂದಣಿ ಸಂಖ್ಯೆ ನಮೂದಿಸುವ ಮೂಲಕ ಬಾಕಿ ಪಾವತಿ ಮಾಡಬಹುದು.
4) ಸಂಚಾರ ನಿರ್ವಹಣ ಕೇಂದ್ರದ ಮೊದಲನೆ ಮಹಡಿಯಲ್ಲೂ ಸಹ ದಂಡ ಪಾವತಿಸಬಹುದಾಗಿದೆ.
5 ) ಹತ್ತಿರ ಸಂಚಾರ ಪೊಲೀಸ್ ಠಾಣೆಗಳಲ್ಲಿ ನಿಮ್ಮ ವಾಹನದ ನೋಂದಣಿ ಸಂಖ್ಯೆಯ ವಿವರಗಳನ್ನು ಒದಗಿಸಿ ಪಡೆಯಬಹುದು. ದಂಡವನ್ನು ಮೊತ್ತವನ್ನು ಪಾವತಿಸಿ ರಶೀದಿ ಪಡೆಯಬಹುದು.. ಹೆಚ್ಚಿನ ಮಾಹಿತಿಗಾಗಿ 080-22942883 ಅಥವಾ 080-22943381 ಅನ್ನು ಸಂಪರ್ಕಿಸಬಹುದು.