HomeKarnataka'ನಾನು ಸನಾತನ ಧರ್ಮದ ಬಗ್ಗೆ ಮಾತನಾಡಿಲ್ಲ' : ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ

‘ನಾನು ಸನಾತನ ಧರ್ಮದ ಬಗ್ಗೆ ಮಾತನಾಡಿಲ್ಲ’ : ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು : ನಾನು ಸನಾತನ ಧರ್ಮದ ಬಗ್ಗೆ ಮಾತನಾಡಿಲ್ಲಎಂದು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್ ‘ನಾನು ಬೇರೆಯವರ ವಿಶ್ಲೇಷಣೆಗಳಿಗೆ ಉತ್ತರ ಕೊಡುವುದಿಲ್ಲ. ನಾನು ಸನಾತನ ಧರ್ಮದ ಬಗ್ಗೆ ಮಾತನಾಡಿಲ್ಲ, ರಾಜಕೀಯ ಕಾರಣಕ್ಕಾಗಿ ಬಿಜೆಪಿಯವರು ವಿವಾದ ಎಬ್ಬಿಸುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.

ಬಿಜೆಪಿಯವರು ಹೋರಾಟ ಮಾಡಲಿ. ರಾಜ್ಯದಲ್ಲಿ ಬಿಜೆಪಿಯವರಿಗೆ ಜನರು ಸರಿಯಾದ ಉತ್ತರ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗೆ ಜನ ಉತ್ತರ ನೀಡಲಿದ್ದಾರೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏನಿದು ವಿವಾದ..?

ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ್ದ ಪರಮೇಶ್ವರ್ ಹಿಂದೂ ಧರ್ಮ ಯಾವಾಗ ಹುಟ್ಟಿತು, ಯಾರು ಹುಟ್ಟು ಹಾಕಿದರು ಎಂಬುದು ಇಂದಿಗೂ ಪ್ರಶ್ನೆಯಾಗಿಯೇ ಉಳಿದಿದೆ ಎಂದಿದ್ದರು.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular