ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿದ್ದ ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ಸಂದಿದ್ದು, ಇದರ ನೆನಪಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿ ಪಾದಯಾತ್ರೆ ನಡೆದಿದೆ.
ಸಾವಿರಾರು ಕಾರ್ಯಕರ್ತರು, ಜನಪ್ರತಿನಿಧಿಗಳು, ಮುಖಂಡರ ಜೊತೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಒಂದು ತಾಸಿನಲ್ಲಿ ನಾಲ್ಕು ಕಿಲೋಮೀಟರ್ ಹೆಜ್ಜೆ ಹಾಕಿದ್ದು, ಜಾನಪದ ಕಲಾತಂಡಗಳ ನೃತ್ಯ, ವಾದ್ಯ ಮೇಳದ ಸದ್ದು ಈ ಪಾದಯಾತ್ರೆಗೆ ಮತ್ತಷ್ಟು ಮೆರಗು ತಂದಿದ್ದು, ಭಾಗವಹಿಸಿದ್ದವರಿಗೆ ಉತ್ಸಾಹ ತುಂಬಿತ್ತು.
ಜಿಲ್ಲಾಧಿಕಾರಿ ಕಚೇರಿ ಎದುರಿನಿಂದ ಆರಂಭವಾದ ಪಾದಯಾತ್ರೆಯು ಪ್ರಮುಖ ಮಾರ್ಗಗಳ ಮೂಲಕ ಹಾದು ಐಜೂರು ವೃತ್ತದಲ್ಲಿ ನಿರ್ಮಿಸಿದ ಬೃಹತ್ ವೇದಿಕೆಯನ್ನು ತಲುಪಿದ್ದು, ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಮಾತನಾಡಿದರು.