ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ದ್ಯಾವಪಟ್ಟಣ ಗ್ರಾಮದ ಜಮೀನಿನಲ್ಲಿ ಶವವಾಗಿ ಪತ್ತೆಯಾಗಿದ್ದ ಮಹಿಳೆ ಕೊಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಕಳೆದ ಮಂಗಳವಾರ ದ್ಯಾವಪಟ್ಟಣ ಗ್ರಾಮದ 33 ವರ್ಷದ ಮಹಿಳೆಯನ್ನು ಕೊಲೆ ಮಾಡಿ ಆಕೆಯ ಜಮೀನಿನಲ್ಲೇ ಪೈಪ್ ಲೈನ್ ನಲ್ಲಿ ಹೂತು ಹಾಕಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಕೊಲೆ ಪ್ರಕರಣ ಬಯಲಿಗೆಳೆಯುಲ್ಲಿ ಯಶಸ್ವಿಯಾಗಿದ್ದಾರೆ. ಅಕ್ರಮ ಸಂಬಂಧದ ಕಾರಣದಿಂದ ಗೃಹಿಣಿಯ ಕೊಲೆ ನಡೆದಿದೆ ಎಂದು ಹೇಳಲಾಗಿದೆ.
ಪ್ರಥಮ ಬಿಎ ಓದುತ್ತಿರುವ ವಿದ್ಯಾರ್ಥಿಯಾಗಿರುವ 17 ವರ್ಷದ ಅಪ್ರಾಪ್ತ ಕೊಲೆ ಆರೋಪಿಯಾಗಿದ್ದಾನೆ. ಮಹಿಳೆ ಪಕ್ಕದ ಮನೆ ನಿವಾಸಿಯಾಗಿರುವ ವಿದ್ಯಾರ್ಥಿಯೊಂದಿಗೆ ಮಹಿಳೆ ಅಕ್ರಮ ಸಂಬಂಧ ಬೆಳೆಸಿದ್ದು, ಇವರ ನಡುವೆ ಉಂಟಾದ ವೈಮನಸ್ಯದಿಂದ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.