HomeKarnatakaಸಾರ್ವಜನಿಕರ ಗಮನಕ್ಕೆ : ಆಧಾರ್-ರೇಷನ್ ಕಾರ್ಡ್ ಲಿಂಕ್ ಮಾಡಲು ಸೆ.30 ಕೊನೆಯ ದಿನಾಂಕ

ಸಾರ್ವಜನಿಕರ ಗಮನಕ್ಕೆ : ಆಧಾರ್-ರೇಷನ್ ಕಾರ್ಡ್ ಲಿಂಕ್ ಮಾಡಲು ಸೆ.30 ಕೊನೆಯ ದಿನಾಂಕ

ಸರ್ಕಾರವು ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು ಕೊನೆಯ ದಿನಾಂಕವನ್ನು 30 ಸೆಪ್ಟೆಂಬರ್ 2023 ಕ್ಕೆ ವಿಸ್ತರಿಸಿದ್ದು, ನಿಗದಿತ ದಿನಾಂಕದೊಳಗೆ ಲಿಂಕ್ ಮಾಡಲು ಸೂಚನೆ ನೀಡಲಾಗಿದೆ.

ಈ ಮೊದಲು ಪಡಿತರ ಚೀಟಿ ಮತ್ತು ಆಧಾರ್ ಲಿಂಕ್ ಗೆ ಕೊನೆಯ ದಿನಾಂಕ 30 ಜೂನ್ 2023 ಆಗಿತ್ತು, ನಂತರ ಅದನ್ನು 30 ಸೆಪ್ಟೆಂಬರ್ 2023 ಕ್ಕೆ ವಿಸ್ತರಿಸಲಾಗಿದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಇವೆರಡೂ ಸರ್ಕಾರ ನೀಡಿರುವ ಪ್ರಮುಖ ದಾಖಲೆಗಳಾಗಿವೆ. ಜನರ ಅನುಕೂಲಕ್ಕಾಗಿ ಸರ್ಕಾರವು ಈ ಎರಡು ಕಾರ್ಡ್ಗಳನ್ನು ಲಿಂಕ್ ಮಾಡಲು ಸೂಚನೆ ನೀಡಿದೆ. ಜನರು ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಲು ಹಾಗೂ ಬಡವರನ್ನು ಸುಲಭವಾಗಿ ಗುರುತಿಸುವ ಮೂಲಕ ಸುಲಭವಾಗಿ ಪಡಿತರವನ್ನು ತಲುಪಿಸಲು ಎರಡೂ ಕಾರ್ಡ್ಗಳನ್ನು ಲಿಂಕ್ ಮಾಡಲು ಸರ್ಕಾರ ಸೂಚನೆ ನೀಡಿದೆ.

ಅಂತ್ಯೋದಯ ಅನ್ನ ಯೋಜನೆಯಡಿ ಪ್ರಯೋಜನ ಪಡೆಯುತ್ತಿರುವ ಜನರಿಗೆ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವುದು ಅವಶ್ಯಕವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುಐಡಿಎಐನ ವೆಬ್ಸೈಟ್ ಮೂಲಕ ರೇಷನ್ ಕಾರ್ಡ್ ಲಿಂಕ್ ಮಾಡಬಹುದು. ರಾಜ್ಯ ಪಿಡಿಎಸ್ ವೆಬ್ಸೈಟ್ ಮೂಲಕವೂ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಜೋಡಣೆ ಮಾಡಬಹುದು, ಅಲ್ಲದೇ ಸಮೀಪದ ಪಡಿತರ ಕಚೇರಿಗೆ ಹೋಗಿ ಉಚಿತವಾಗಿ ನೀವು ಆಧಾರ್ ನಂಬರ್ ಲಿಂಕ್ ಮಾಡಬಹುದು.

ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡುವುದು ಹೇಗೆ..?

ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಆನ್ಲೈನ್ನಲ್ಲಿ ಲಿಂಕ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ:
• ನಿಮ್ಮ ರಾಜ್ಯದ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪೋರ್ಟಲ್ ಅಧಿಕೃತ ವೆಬ್ಸೈಟ್ ಗೆ ಹೋಗಿ.
• ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ ಮತ್ತು ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
• ‘ಮುಂದುವರಿಯಿರಿ’ ಮೇಲೆ ಕ್ಲಿಕ್ ಮಾಡಿ.
• ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಒನ್ ಟೈಮ್ ಪಾಸ್ವರ್ಡ್ (ಒಟಿಪಿ) ಬರುತ್ತದೆ.
• ಒಟಿಪಿ ನಮೂದಿಸಿ ಮತ್ತು ಪಡಿತರ ಚೀಟಿ ಆಧಾರ್ ಕಾರ್ಡ್ ಲಿಂಕ್ ಕ್ಲಿಕ್ ಮಾಡಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular