HomeKarnatakaಗಮನಿಸಿ : ಸಶಸ್ತ್ರ ಮೀಸಲು ಪೊಲೀಸ್ ಪಡೆಯ 420 ಹುದ್ದೆಗಳಿಗೆ ನಾಳೆ ಲಿಖಿತ ಪರೀಕ್ಷೆ |Karnataka...

ಗಮನಿಸಿ : ಸಶಸ್ತ್ರ ಮೀಸಲು ಪೊಲೀಸ್ ಪಡೆಯ 420 ಹುದ್ದೆಗಳಿಗೆ ನಾಳೆ ಲಿಖಿತ ಪರೀಕ್ಷೆ |Karnataka Police Recruitment

ಬೆಂಗಳೂರು: ನಗರ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಸಿಎಆರ್ ಮತ್ತು ಡಿಎಎಆರ್)ಯಲ್ಲಿ ಖಾಲಿ ಇರುವ 420 ಹುದ್ದೆಗಳಿಗೆ ಸೆ.10ರಂದು ನಾಳೆ ಲಿಖಿತ ಪರೀಕ್ಷೆ ನಡೆಯಲಿದೆ.

ರಾಜ್ಯ ಪೊಲೀಸ್ ಇಲಾಖೆಯು ನೋಟಿಫಿಕೇಶನ್ ಹೊರಡಿಸಿ 420 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (ಸಿಎಆರ್/ಡಿಎಆರ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿತ್ತು. ಇದೀಗ ಪರೀಕ್ಷೆ ನಾಳೆ ನಡೆಯಲಿದೆ. ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ 100 ಅಂಕಗಳಿಗೆ ವಸ್ತುನಿಷ್ಠ ಮಾದರಿಯ ಕನ್ನಡ / ಇಂಗ್ಲಿಷ್ ಭಾಷೆಯ ಪ್ರಶ್ನೆ ಪತ್ರಿಕೆ ಇರುತ್ತದೆ ಎಂದು ತಿಳಿದು ಬಂದಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಾಳೆ ಬೆಳಗ್ಗೆ 11ರಿಂದ ಮಧ್ಯಾಹ್ನ 12.30 ರವರೆಗೆ ಪರೀಕ್ಷೆ ನಡೆಯಲಿದೆ. ಬೆಂಗಳೂರು ನಗರ, ಚಿತ್ರದುತ್ರ, ಹಾಗೂ ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆ , ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ.ಹಾಲ್ ಟಿಕೆಟ್ ಗಳನ್ನು ಡೌನ್ ಲೋಡ್ ಮಾಡಿಕೊಂಡು ಪರೀಕ್ಷೆ ದಿನಾಂಕ, ಸ್ಥಳದ ಬಗ್ಗೆ ನಿಗದಿಪಡಿಸಿಕೊಳ್ಳಿ ಎಂದು ರಾಜ್ಯ ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಯಡಾ ಮಾರ್ಟಿಲ್ ಮಾರ್ಬನ್ಯಾಂಗ್ ಇತ್ತೀಚೆಗೆ ತಿಳಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular