ಬೆಂಗಳೂರು: ಇಷ್ಟು ದಿನ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ಹಿರಿಯ ನಾಯಕ, ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಇದೀಗ ನೇರಾನೇರ ವಾಗ್ದಾಳಿ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನ್ನನ್ನು ಮಂತ್ರಿ ಮಾಡದಿದ್ದಕ್ಕೆ ಸಿಎಂ ಸಿದ್ದರಾಮಯ್ಯನವರಿಗೆ ಧನ್ಯವಾದ ಎಂದು ಹೇಳುವ ಮೂಲಕ ಟಾಂಗ್ ನೀಡಿದ ಬಿ.ಕೆ.ಹರಿಪ್ರಸಾದ್, ಹಿಂದಿನ ಯಾವ ಮುಖ್ಯಮಂತ್ರಿಗಳು ಜಾತಿ ರಾಜಕಾರಣ ಮಾಡುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಎಂದೂ ಜಾತಿ ರಾಜಕಾರಣ ಮಾಡಲಿಲ್ಲ. ದೇವರಾಜ್ ಅರಸು ಅವರ ಕಾರಲ್ಲಿ ಕುಳಿತರೆ ಸಾಲದು ಅರಸು ಅವರ ಚಿಂತನೆ ಇರಬೇಕು. ಪಂಚೆ, ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿ ನಾನು ಸಮಾಜವಾದಿ ಅಂತ ಹೇಳಿದರೆ ಆಗೋದಿಲ್ಲ… ನಾನು 3 ಬಾರಿ ಸೋತಿರಬಹುದು ಆದರೆ ಇನ್ನೂ ಸತ್ತಿಲ್ಲ ಎಂದು ಕಿಡಿ ಕಾರಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಪಕ್ಷದ ವಿರುದ್ಧವೂ ಹರಿಹಾಯ್ದ ಬಿ.ಕೆ.ಹರಿಪ್ರಸಾದ್, ಪರಮೇಶ್ವರ್ ಅವರಿಗೆ ಸಿಎಂ ಆಗುವ ಅರ್ಹತೆ ಇತ್ತು. ಆದಾಗ್ಯೂ ಮುಖ್ಯಮಂತ್ರಿಯನ್ನಾಗಿ ಮಾಡಲಿಲ್ಲ ಎಂದು ಗುಡುಗಿದ್ದಾರೆ.