ನವದೆಹಲಿ: ಜಿ20 ಅಧ್ಯಕ್ಷ ರಾಷ್ಟ್ರವಾಗಿ ಭಾರತ ಒಟ್ಟಾರೆ ನಿರ್ವಹಣೆ, ಜ್ವಲಂತ ವಿಷಯಗಳ ಬಗ್ಗೆ ಜಿ20 ಸದಸ್ಯ ರಾಷ್ಟ್ರಗಳ ಸಮ್ಮತಿ ಪಡೆಯುವಲ್ಲಿ ಯಶಸ್ವಿಯಾಗಿದೆ.
ಪ್ರಸ್ತುತ ನಡೆಯುತ್ತಿರುವ ಜಿ20 ಸಭೆಯ ಸಂದೇಶ ಜಾಗತಿಕವಾಗಿ ಭಾರತವನ್ನು ಮತ್ತಷ್ಟು ಬಲಶಾಲಿಯಾಗಿ ಮಾಡುವ ನಿರೀಕ್ಷೆ ಇದೆ. ಜಾಗತಿಕ ಪ್ರಬಲ ಆರ್ಥಿಕತೆಯಾಗಿ ಹೊರ ಹೊಮ್ಮುತ್ತಿರುವ ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಶಾಶ್ವತ ಸದಸ್ಯತ್ವ ಇನ್ನೂ ಸಿಕ್ಕಿಲ್ಲ.
ಪ್ರಸ್ತುತ ಭಾರತ ಭೇಟಿಯಲ್ಲಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ನಂತರ ಭಾರತ ವಿಶ್ವಸಂಸ್ಥೆ ಭದ್ರತಾ ಸಮಿತಿಯಲ್ಲಿ ಸದಸ್ಯತ್ವ ಪಡೆದುಕೊಳ್ಳಲು ಬೆಂಬಲಿಸುವುದಾಗಿ ಹೇಳಿದ್ದಾರೆ. ಅಮೆರಿಕ ಈ ಹಿಂದೆಯೂ ಹಲವು ಬಾರಿ ಈ ರೀತಿಯ ಘೋಷಣೆ ಮಾಡಿದೆ. ಪ್ರಸ್ತುತ ಜಿ20 ಅಧ್ಯಕ್ಷ ರಾಷ್ಟ್ರವಾಗಿ ಭಾರತ ಸಮಸ್ತ ನಿರ್ವಹಣೆ ತೋರಿದ್ದು, ವಿಶ್ವಸಂಸ್ಥೆ ಭದ್ರತಾ ಸಮಿತಿ ಶಾಶ್ವತ ಸದಸ್ಯ ಸ್ಥಾನದತ್ತ ಹೆಜ್ಜೆ ಇಟ್ಟಿದೆ ಎನ್ನಲಾಗಿದೆ.