HomeLatest NewsBIG BREAKING: ಪಾಕಿಸ್ತಾನ ವಿರುದ್ಧ ಕೊಹ್ಲಿ ಭರ್ಜರಿ ಶತಕ ಸಹಿತ ಹಲವು ದಾಖಲೆ

BIG BREAKING: ಪಾಕಿಸ್ತಾನ ವಿರುದ್ಧ ಕೊಹ್ಲಿ ಭರ್ಜರಿ ಶತಕ ಸಹಿತ ಹಲವು ದಾಖಲೆ

ಕೊಲಂಬೊ: ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಕೆ.ಎಲ್. ರಾಹುಲ್ ಭರ್ಜರಿ ಶತಕ ಗಳಿಸಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೂಡ ಭರ್ಜರಿ ಶತಕ ಸಿಡಿಸಿದ್ದಾರೆ.

ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ 47ನೇ ಶತಕ ಬಾರಿಸಿದ್ದಾರೆ. ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಸತತ ನಾಲ್ಕನೇ ಶತಕ ಗಳಿಸಿದ್ದಾರೆ. ಅಲ್ಲದೇ, ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ 13 ಸಾವಿರ ರನ್ ಬಾರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

278 ಏಕದಿನ ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 13,024 ರನ್ ಗಳಿಸಿದ್ದಾರೆ. 47 ಶತಕ, 65 ಅರ್ಧ ಶತಕ ಸಿಡಿಸಿದ್ದಾರೆ.

ಭಾರತ 50 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 356 ರನ್ ಗಳಿಸಿದೆ. ವಿರಾಟ್ ಕೊಹ್ಲಿ ಅಜೇಯ 122, ಕೆ.ಎಲ್. ರಾಹುಲ್ ಅಜೇಯ 111 ರನ್ ಗಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular