ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಶಾಸಕ ಆರ್.ಅಶೋಕ್ ಅವರಿಗೆ ಕರೆ ಮಾಡಿ ಚರ್ಚಿಸಿದ್ದಾರೆ.
ಈ ಬಗ್ಗೆ ಮಾಜಿ ಸಚಿವ, ಶಾಸಕ ಆರ್.ಅಶೋಕ್ ಮಾಹಿತಿ ನೀಡಿದ್ದು, ಸ್ವತಃ ಕುಮಾರಸ್ವಾಮಿಯವರೇ ದೂರವಾಣಿ ಕರೆ ಮಾಡಿ ಮಾತನಾಡಿದ್ದರು. ಎಲ್ಲವೂ ಒಳ್ಳೆಯದಾಗುತ್ತೆ ಬ್ರದರ್, ಒಟ್ಟಿಗೆ ಕೆಲಸ ಮಾಡೋಣ ಎಂದು ಹೇಳಿದ್ದಾರೆ. ಇದರಿಂದ ರಾಜ್ಯದಲ್ಲಿ ಒಂದು ರೀತಿಯ ಪಾಸಿಟಿವ್ ಎನರ್ಜಿ ಇದೆ ಎಂದರು.
ಇನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಮ್ಮ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಬಗ್ಗೆ ಹಾಗೂ ಪ್ರಧಾನಿ ಮೋದಿ ಬಗ್ಗೆ ಒಳ್ಳೆಯ ಮಾತನಾಡಿದ್ದಾರೆ. ಸೀಟು ಹಂಚಿಕೆ ವಿಚಾರವಾಗಿ ಇನ್ನೂ ನಿರ್ಧಾರವಾಗಿಲ್ಲ ಅದನ್ನು ಪ್ರಧಾನಿ ಮೋದಿ ಹಾಗೂ ಕುಮಾರಸ್ವಾಮಿ ತೀರ್ಮಾನ ಮಾಡಲಿದ್ದಾರೆ ಎಂದರು.
ಮಂಡ್ಯ ಲೋಕಸಭಾ ಕ್ಷೇತ್ರದ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಸಂಸದೆ ಸುಮಲತಾ ಪಟ್ಟುಹಿಡಿದು ಕುಳಿತಿಲ್ಲ. ಹಾಸನ, ಬೆಂಗಳೂರು ಗ್ರಾಮಾಂತರದ ಬಗ್ಗೆ ಸಮಸ್ಯೆ ಇಲ್ಲ. ಕೆಲವರು ಸ್ಪರ್ಧೆ ಮಾಡಲ್ಲ ಎಂದಿದ್ದಾರೆ. ಮೊದಲು ಯಾವ ಚುನಾವಣೆ ಬರುತ್ತೆ ಅದಕ್ಕೆ ಮೈತ್ರಿ ಆಗುತ್ತೆ. ಎಲ್ಲವನ್ನೂ ಕೇಂದ್ರದ ನಾಯಕರು ತೀರ್ಮಾನ ಮಾಡ್ತಾರೆ ಎಂದು ತಿಳಿಸಿದ್ದಾರೆ.