ನವದೆಹಲಿ: ಡೀಸೆಲ್ ವಾಹನಗಳ ಮಾರಾಟದ ಮೇಲೆ ಹೆಚ್ಚುವರಿ 10% ಜಿಎಸ್‌ಟಿಯ ಪ್ರಸ್ತಾಪವಿಲ್ಲ ಎಂದು ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಡೀಸೆಲ್ ವಾಹನಗಳ ಮಾರಾಟದ ಮೇಲೆ ಹೆಚ್ಚುವರಿ 10 ಪ್ರತಿಶತ ಜಿಎಸ್ಟಿಗೆ ಯಾವುದೇ ಪ್ರಸ್ತಾಪವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಡೀಸೆಲ್ ವಾಹನಗಳ ಮಾರಾಟದ ಮೇಲೆ ಹೆಚ್ಚುವರಿ 10 ಪ್ರತಿಶತ ಜಿಎಸ್‌ಟಿಯನ್ನು ವಿಧಿಸಲಾಗುವುದು ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ತಿಳಿಸಿದ ಗಡ್ಕರಿ, ಆದರೆ, ಅಂತಹ ಯಾವುದೇ ಪ್ರಸ್ತಾಪವು ಪ್ರಸ್ತುತ ಸರ್ಕಾರದ ಸಕ್ರಿಯ ಪರಿಗಣನೆಯಲ್ಲಿಲ್ಲ ಎಂದು ತಿಳಿಸಿದ್ದಾರೆ.
2070 ರ ವೇಳೆಗೆ ಕಾರ್ಬನ್ ನೆಟ್ ಶೂನ್ಯವನ್ನು ಸಾಧಿಸಲು ಮತ್ತು ಡೀಸೆಲ್‌ನಂತಹ ಅಪಾಯಕಾರಿ ಇಂಧನಗಳಿಂದ ಉಂಟಾಗುವ ವಾಯು ಮಾಲಿನ್ಯದ ಮಟ್ಟವನ್ನು ಕಡಿಮೆ ಮಾಡಲು ಸರ್ಕಾರದ ಬದ್ಧತೆಗಳಿಗೆ ಅನುಗುಣವಾಗಿ, ಶುದ್ಧ ಮತ್ತು ಹಸಿರು ಇಂಧನಗಳನ್ನು ಸಕ್ರಿಯವಾಗಿ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.