ಸೆ.15 ರಂದು ‘ಸಂವಿಧಾನ ಪೀಠಿಕೆ ವಾಚನ’ ಕಾರ್ಯಕ್ರಮ : ಈ ರೀತಿ ನೋಂದಣಿ ಮಾಡಿಕೊಳ್ಳಿ

ಬೆಂಗಳೂರು : ಸೆ.15 ರಂದು ಬೆಳಿಗ್ಗೆ 10 ಕ್ಕೆ  ಎಲ್ಲಾ ಇಲಾಖೆಗಳ ಸಿಬ್ಬಂದಿ ವರ್ಗ, ಶಾಲಾ- ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ, ಗ್ರಾಮ ಪಂಚಾಯತ್, ಜಿಲ್ಲಾ, ತಾಲ್ಲೂಕು ಮಟ್ಟದ ಕಚೇರಿಗಳಲ್ಲಿ “ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ” ಅಂಗವಾಗಿ ಭಾರತದ ಸಂವಿಧಾನ ಪ್ರಸ್ತಾವನೆಯನ್ನು ಓದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.

ಸೆಪ್ಟೆಂಬರ್, 15 ರ ಬೆಳಗ್ಗೆ 10 ಗಂಟೆ ವರೆಗೂ ಹೆಸರು ನೋಂದಣಿಗೆ ಅವಕಾಶವಿದ್ದು, ನೋಂದಣಿ ಮಾಡದಿರುವವರು ಹೆಸರು ನೋಂದಾಯಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಸಂವಿಧಾನದ ಪೀಠಿಕೆ ಓದಲು ಆನ್‍ಲೈನ್ ನೋಂದಣಿ ಪ್ರಕ್ರಿಯೆ ಅತ್ಯಂತ ಸರಳವಾಗಿದೆ. ಸಮಾಜ ಕಲ್ಯಾಣ ಇಲಾಖೆ ರೂಪಿಸಿರುವ ವೆಬ್‍ಸೈಟ್  https://thepreamble-swdkar.in ನಲ್ಲಿ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ, ಮುಂತಾದ ವಿವರ ನೀಡಿ ನೋಂದಣಿ ಮಾಡಿಕೊಳ್ಳಬೇಕು. ಇದಕ್ಕಾಗಿ ಒಟ್ಟು 10 ವಿಭಾಗಗಳನ್ನು ವೆಬ್‍ಸೈಟ್‍ನಲ್ಲಿ ಮಾಡಿದ್ದು, ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯ ಶಾಲೆಗಳು, ಶಿಕ್ಷಣ, ಉನ್ನತ ಶಿಕ್ಷಣ, ವೈದ್ಯಕೀಯ ಶಿಕ್ಷಣ ಇಲಾಖೆಗಳ ಶಾಲೆ, ಕಾಲೇಜುಗಳು. ಎಲ್ಲ ರೀತಿಯ ಖಾಸಗಿ ಶಾಲೆ, ಕಾಲೇಜುಗಳು, ಹೀಗೆ ಕನಿಷ್ಟ 10 ಸದಸ್ಯರ ಗುಂಪು ಒಳಗೊಂಡು ನೋಂದಣಿ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read