ಉಡುಪಿ : ಉದ್ಯಮಿಯೊಬ್ಬರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಚೈತ್ರಾ ಕುಂದಾಪುರ ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿಗೆ ಸುಮಾರು 7 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಅವರನ್ನು ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ವಶಕ್ಕೆ ಪಡೆಯಲಾಗಿದೆ.
ಸದ್ಯ ಇಬ್ಬರು ಆರೋಪಿಗಳನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ ನಾಯಕ್ ಹಾಗೂ ಪ್ರಸಾದ್ ಎಂಬುವರು ಸೇರಿ ಒಟ್ಟು ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ.