
ಮೃತ ಯುವತಿಯನ್ನು ಆಶಾ (25) ಎಂದು ಗುರುತಿಸಲಾಗಿದೆ. ಆಶಾ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಯುವತಿಗೆ ಡೆಂಗ್ಯೂ ಜ್ವರ ಇರುವ ಬಗ್ಗೆ ವೈದ್ಯರು ಸ್ಪಷ್ಟವಾದ ಮಾಹಿತಿ ನೀಡಿಲ್ಲ, ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಆದರೆ ಯುವತಿ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

