HomeKarnatakaBREAKING : ‘ಚೈತ್ರಾ ಕುಂದಾಪುರ’ ಸೇರಿ 6 ಆರೋಪಿಗಳು 10 ದಿನ ‘ಸಿಸಿಬಿ’ ಕಸ್ಟಡಿಗೆ

BREAKING : ‘ಚೈತ್ರಾ ಕುಂದಾಪುರ’ ಸೇರಿ 6 ಆರೋಪಿಗಳು 10 ದಿನ ‘ಸಿಸಿಬಿ’ ಕಸ್ಟಡಿಗೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ರೂಪಾಯಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ, ಹಿಂದೂ ನಾಯಕಿ ಚೈತ್ರಾ ಕುಂದಾಪುರ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್, ಧನರಾಜ್ ನನ್ನು ಬಂಧಿಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು, ಆರೋಪಿಗಳನ್ನು ಕೋರ್ಟ್ ಗೆ ಹಾಜರು ಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರ ಬಳಿ ಮನವಿ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರ ಮನವಿ ಆಲಿಸಿದ ನ್ಯಾಯಾಧೀಶರು ಸೆ.23ರವರೆಗೆ ಆರೋಪಿಗಳನ್ನು ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular