HomeAutoBIG NEWS: ಕಾರ್ ಗಳಲ್ಲಿ 6 ಏರ್ ಬ್ಯಾಗ್ ಕಡ್ಡಾಯ ವಾಪಸ್

BIG NEWS: ಕಾರ್ ಗಳಲ್ಲಿ 6 ಏರ್ ಬ್ಯಾಗ್ ಕಡ್ಡಾಯ ವಾಪಸ್

ನವದೆಹಲಿ: ಕಾರ್ ಗಳಲ್ಲಿ ಆರು ಏರ್‌ ಬ್ಯಾಗ್‌ ಗಳು ಕಡ್ಡಾಯ ಹೇಳಿಕೆಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಿಂತೆಗೆದುಕೊಂಡಿದ್ದಾರೆ. ಸರ್ಕಾರ ಅದನ್ನು ಕಡ್ಡಾಯ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ನಾವು ಕಾರುಗಳಿಗೆ ಆರು ಏರ್‌ ಬ್ಯಾಗ್‌ ಗಳ ನಿಯಮವನ್ನು ಕಡ್ಡಾಯಗೊಳಿಸಲು ಬಯಸುವುದಿಲ್ಲ ಎಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗಡ್ಕರಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2022 ರಲ್ಲಿ ಗಡ್ಕರಿ ಅವರು ಪ್ರಯಾಣಿಕ ಕಾರ್ ಗಳಿಗೆ 6 ಏರ್‌ಬ್ಯಾಗ್ ನಿಯಮವನ್ನು ಭಾರತ ಸರ್ಕಾರವು ಕಡ್ಡಾಯಗೊಳಿಸಿದೆ ಎಂದು ಹೇಳಿದ್ದರು. ಈ ನಿಯಮವು ಅಕ್ಟೋಬರ್ 2023 ರಲ್ಲಿ ಜಾರಿಗೆ ಬರಲಿದೆ ಎಂದು ಹೇಳಲಾಗಿತ್ತು.

ಈಗ ಗಡ್ಕರಿ ಅವರು, ಆರು ಏರ್‌ ಬ್ಯಾಗ್ ಹೇಳಿಕೆ ಹಿಂತೆಗೆದುಕೊಂಡಿದ್ದು, ಸರ್ಕಾರ ಅದನ್ನು ಕಡ್ಡಾಯ ಮಾಡುವುದಿಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular