
ಬೆಂಗಳೂರು: ಹಬ್ಬದ ಸಂದರ್ಭಗಳಲ್ಲಿ ಮಿತಿ ಮೀರಿ ಟಿಕೆಟ್ ದರ ಹೆಚ್ಚಳ ಮಾಡುವ ಖಾಸಗಿ ಬಸ್ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.
ಸಾರಿಗೆ ಇಲಾಖೆ ಆಯುಕ್ತ ಯೋಗೀಶ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಹೆಚ್ಚವರಿ ಹಣ ಪಡೆದು ಆನ್ಲೈನ್ ಮೂಲಕ ಟಿಕೆಟ್ ನೀಡುವ ವಿತರಕರ ವಿರುದ್ಧವೂ ಕ್ರಮ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.
ಈ ಬಾರಿ ಗೌರಿ ಗಣೇಶ ಹಬ್ಬದೊಂದಿಗೆ ವಾರಾಂತ್ಯ ರಜೆ ಇರುವುದರಿಂದ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿರುವ ಖಾಸಗಿ ಬಸ್ ಗಳು ಟಿಕೆಟ್ ದರವನ್ನು ನಿಗದಿಗಿಂತ ದುಪ್ಪಟ್ಟು ಮಾಡಿ ಪ್ರಯಾಣಿಕರನ್ನು ಸುಲಿಗೆ ಮಾಡುತ್ತವೆ.
ಆನ್ಲೈನ್ ಮೂಲಕ ಟಿಕೆಟ್ ಬುಕಿಂಗ್ ಮಾಡುವ ಕೇಂದ್ರಗಳಲ್ಲಿ ಹೆಚ್ಚಿನ ಹಣ ಪಡೆದು ಮುಂಗಡ ಟಿಕೆಟ್ ಕಾಯಿರಿಸಲಾಗುತ್ತಿದೆ. ಇದನ್ನು ನಿಲ್ಲಿಸಬೇಕು. ಈ ರೀತಿ ಹೆಚ್ಚುವರಿ ಹಣ ಪಡೆದು ಟಿಕೆಟ್ ನೀಡುವುದು ಗಮನಕ್ಕೆ ಬಂದಲ್ಲಿ ಅಂತಹ ಖಾಸಗಿ ಬಸ್ ಮಾಲೀಕರು, ಆನ್ಲೈನ್ ಟಿಕೆಟ್ ವಿತರಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.