ಭಾರತ ಹಾಗೂ ಶ್ರೀಲಂಕಾ ನಡುವಣ ಏಷ್ಯಾ ಕಪ್ ನ ಸೂಪರ್ ಫೋರ್ ಪಂದ್ಯದಲ್ಲಿ ಭಾರತ ತಂಡ ರೋಚಕ ಜಯ ಸಾಧಿಸುವ ಮೂಲಕ ಫೈನಲ್ ಗೆ ಎಂಟ್ರಿ ಕೊಟ್ಟಿದ್ದಾರೆ. ಇಂದು ಪ್ರೇಮದಾಸ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಹಾಗೂ ಶ್ರೀಲಂಕಾ ಮುಖಮುಖಿಯಾಗುತ್ತಿದ್ದು, ಗೆದ್ದ ತಂಡ ಫೈನಲ್ ಪ್ರವೇಶಿಸಲಿದೆ.
ಬಾಂಗ್ಲಾದೇಶ ಈಗಾಗಲೇ ಹೊರ ಉಳಿದಿದ್ದು, ಫೈನಲ್ ಗೆ ಲಗ್ಗೆ ಇಡಲು ಶ್ರೀಲಂಕಾ ಹಾಗೂ ಪಾಕಿಸ್ತಾನ ಸೆಣಸಾಡಲಿವೆ. ಶ್ರೀಲಂಕಾ ತಂಡದಲ್ಲಿ ಸ್ಪಿನ್ನರ್ ಗಳೇ ಹೆಚ್ಚಾಗಿದ್ದು, ಎದುರಾಳಿ ತಂಡದ ಬ್ಯಾಟ್ಸ್ಮನ್ಗಳಿಗೆ ನಡುಕ ಹುಟ್ಟಿಸುತ್ತಾರೆ.
ಏಷ್ಯಾ ಕಪ್ ನಲ್ಲಿ ಎರಡು ತಂಡಗಳು ಹಲವಾರು ದಾಖಲೆ ಬರೆದಿದ್ದು, ಇಂದಿನ ಪಂದ್ಯ ಸಾಕಷ್ಟು ರೋಚಕವಾಗಿರಲಿದೆ. ಸೆಪ್ಟೆಂಬರ್ 17ರಂದು ಕೊಲಂಬೊದಲ್ಲಿ ಏಷ್ಯಾ ಕಪ್ ನ ಫೈನಲ್ ಪಂದ್ಯ ನಡೆಯಲಿದೆ.