alex Certify ಗಮನಿಸಿ : ಹಿಂದುಳಿದ ವರ್ಗದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಹಿಂದುಳಿದ ವರ್ಗದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎಸ್.ಆರ್.ಸುರೇಶ್ಬಾಬು ಅವರು ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿಯು ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ಗೆ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿಗೆ ರೂ.1 ಲಕ್ಷ ಒಳಗಿರಬೇಕು. ವಿದ್ಯಾರ್ಥಿಗಳು https://shp.karnataka.gov.in ಅನ್ನು ಸಂಪರ್ಕಿಸಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://bcwd.karnataka.gov.in ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಡಿ.ದೇವರಾಜು ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಹಾಗೂ ಸಹಾಯವಾಣಿ ಸಂಖ್ಯೆ 8050770005 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...