ಬೆಂಗಳೂರು: ಕ್ರಿಮಿನಲ್ ಪ್ರಕರಣ ಕೈಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ಮಲ್ಲಿಕಾರ್ಜುನ್ ಬಿ.ಎಂ @ರವಿ ದೂರು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ತನ್ನ ವಿರುದ್ಧದ ಪ್ರಕರಣ ರದ್ದು ಕೋರಿ ಅಲೋಕ್ ಕುಮಾರ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
2014ರಲ್ಲಿ ಕ್ರಿಮಿನಲ್ ಪ್ರಕರಣ ಕೈಬಿಡಲು ಇತರೆ ಪೊಲೀಸರ ಮೂಲಕ 1 ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಅಲೋಕ್ ಕುಮಾರ್ ವಿರುದ್ಧ ಕೇಳಿಬಂದಿತ್ತು. ಮಲ್ಲಿಕಾರ್ಜುನ್ @ರವಿ ಅಲೋಕ್ ಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು, ಬಿ ರಿಪೋರ್ಟ್ ಸಲ್ಲಿಸಿದ್ದರು.
ಬಿ ರಿಪೋರ್ಟ್ ತಿರಸ್ಕರಿ ಪ್ರಕರಣವನ್ನು ಲೋಕಾಯುಕ್ತ ವಿಶೇಷ ಕೋರ್ಟ್ ಮುಂದುವರೆಸಿತ್ತು. ಈ ಹಿನ್ನೆಲೆಯಲ್ಲಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಲೋಕಾಯುಕ್ತ ಕೋರ್ಟ್ ಆದೇಶ ಪ್ರಶ್ನಿಸಿ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.