HomeKarnatakaBIG NEWS: ಬಿ.ಕೆ.ಹರಿಪ್ರಸಾದ್ ಮನವೊಲಿಕೆಗೆ ಕಾಂಗ್ರೆಸ್ ನಾಯಕರ ಯತ್ನ

BIG NEWS: ಬಿ.ಕೆ.ಹರಿಪ್ರಸಾದ್ ಮನವೊಲಿಕೆಗೆ ಕಾಂಗ್ರೆಸ್ ನಾಯಕರ ಯತ್ನ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ, ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪರೋಕ್ಷ ವಾಗ್ದಾಳಿ ವಿಚಾರವಾಗಿ ಸರ್ಕಾರಕ್ಕೆ ಮುಜುಗರ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಬಿ.ಕೆ.ಹರಿಪ್ರಸಾದ್ ಮನವೊಲಿಕೆಗೆ ಮುಂದಾಗಿದ್ದಾರೆ.

ಇಂದು ಸಂಜೆ 6 ಗಂಟೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಕಾಂಗ್ರೆಸ್ ನಾಯಕರು ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಹರಿಪ್ರಸಾದ್ ಭೇಟಿಗೂ ಮುನ್ನ ಸತೀಶ್ ಜರಕಿಹೊಳಿ ಹಾಗೂ ಡಾ.ಜಿ.ಪರಮೇಶ್ವರ್ ಚರ್ಚೆ ನಡೆಸಿದ್ದಾರೆ. ಊಟದ ನೆಪದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular