alex Certify ಗೌರಿ-ಗಣೇಶ ಹಬ್ಬ ಆಚರಣೆಗೆ ಮಾರ್ಗಸೂಚಿ : ನಿಯಮಗಳ ಪಾಲನೆ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೌರಿ-ಗಣೇಶ ಹಬ್ಬ ಆಚರಣೆಗೆ ಮಾರ್ಗಸೂಚಿ : ನಿಯಮಗಳ ಪಾಲನೆ ಕಡ್ಡಾಯ

ಮಡಿಕೇರಿ : ಗೌರಿ ಗಣೇಶ ಹಬ್ಬ ಆಚರಣೆ ಸಂಬಂಧ ಅಗತ್ಯ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಎಲ್ಲರೂ ಜಿಲ್ಲಾಡಳಿತದ ಜೊತೆ ಸಹಕರಿಸುವಂತೆ ವರ್ಣಿತ್ ನೇಗಿ ಅವರು ಕೋರಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಗೌರಿ-ಗಣೇಶ ಹಬ್ಬ ಆಚರಿಸುವ ಸಂಬಂಧ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದನ್ನು ಪಾಲಿಸುವಂತೆ ಜಿ.ಪಂ.ಸಿಇಒ ಅವರು ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಆ ನಿಟ್ಟಿನಲ್ಲಿ ಕಾನೂನು ಮತ್ತು ನಿಯಮಗಳನ್ನು ಚಾಚು ತಪ್ಪದೆ ಪಾಲಿಸಬೇಕು. ಏನಾದರೂ ಸಮಸ್ಯೆಗಳು ಇದ್ದಲ್ಲಿ ಗಮನಕ್ಕೆ ತರುವಂತೆ ಸಲಹೆ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ಗೌರಿ ಗಣೇಶ ಹಬ್ಬ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಅತೀ ಮುಖ್ಯವಾಗಿದೆ. ವೇಗವಾಗಿ ವಾಹನ ಚಲಾಯಿಸುವುದು ಸೇರಿದಂತೆ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ಮಾಡಬಾರದು ಎಂದು ಸಲಹೆ ಮಾಡಿದರು.
ಬ್ಯಾನರ್ ಮತ್ತು ಪೋಸ್ಟರ್ ಅಳವಡಿಸಲು ಸ್ಥಳೀಯ ಸಂಸ್ಥೆ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು. ಧ್ವನಿವರ್ಧಕ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ನಿಯಮಗಳನ್ನು ಪಾಲಿಸಬೇಕು. ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕ ಬಳಸಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಹೇಳಿದರು.
ಸಭೆಯ ಆರಂಭದಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಬಣ್ಣ ರಹಿತ ಮಣ್ಣಿನ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ. ನಂತರ ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸ್ಥಳಗಳಲ್ಲಿಯೇ ಮೂರ್ತಿ ವಿಸರ್ಜಿಸಬೇಕು.

ನಗರ ಪಟ್ಟಣಗಳಲ್ಲಿ ಅನಧಿಕೃತ ಪ್ಲೆಕ್ಸ್, ಪ್ಲಾಸ್ಟಿಕ್ ಬ್ಯಾನರ್ಗಳನ್ನು ಅಳವಡಿಸಲು ಅನುಮತಿ ಪಡೆಯಬೇಕು. ಸಾರ್ವಜನಿಕವಾಗಿ ಗಣೇಶ ವಿಗ್ರಹಗಳನ್ನು ಇಡಲು ಇಚ್ಚಿಸುವ ಸಮಿತಿಯವರು ಉತ್ಸವ ಆಚರಿಸಲು ಬೇಕಾಗುವ ಪೂರ್ವ ತಯಾರಿಗೆ ಸಂಬಂಧಿಸಿದಂತೆ, ಧ್ವನಿವರ್ಧಕಗಳಿಗೆ ಸಂಬಂಧಿಸಿದಂತೆ ಹಾಗೂ ಇತರೆ ಪರವಾನಗಿಗಳಿಗೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರಗಳಿಂದ ಅನುಮೋದನೆ ಪಡೆಯುವುದು ಕಡ್ಡಾಯವಾಗಿದೆ ಎಂದು ಹೆಚ್ಚುವರಿ ಜಿಲ್ಲಧಿಕಾರಿ ಅವರು ತಿಳಿಸಿದರು.

ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಗಣೇಶ ಪೆಂಡಾಲ್ಗಳಲ್ಲಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳಾದ ಬಲೂನ್ಗಳು, ಬಲೂನ್ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್ಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್ಗಳು, ಪ್ಲಾಸ್ಟಿಕ್ ಐಸ್ಕ್ರೀಮ್ ಸ್ಟಿಕ್ಗಳು, ಅಲಂಕಾರಕ್ಕಾಗಿ ಬಳಸುವ ಪಾಲಿಸ್ಟೈರೀನ್(ಥರ್ಮೊಕೋಲ್) ಬಳಸದಂತೆ ನಿಗಾವಹಿಸುವುದು.

ಎಲ್ಲಾ ರೀತಿಯ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ಗಳು (ಕಾಂಪೋಸ್ಟೇಬಲ್, ಬಯೋ ಡಿಗ್ರಿಡೇಬಲ್ ಇತರೆ) ಪ್ಲಾಸ್ಟಿಕ್ ಧ್ವಜಗಳು, ಅಂಟಿಕೊಳ್ಳುವ ಫಿಲ್ಮ್ಗಳು, ಡೈನಿಂಗ್ ಟೇಬಲ್ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆಗಳು, ಸ್ಟ್ರಾಗಳು, ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳು, ಪ್ಲಾಸ್ಟಿಕ್ ಪ್ಲೇಟ್ಗಳು, ಪ್ಲಾಸ್ಟಿಕ್ ಕಪ್ಗಳು ಮತ್ತು ಲೋಟಗಳು, ಪೋರ್ಕ್, ಚಮಚ, ಚಾಕುಗಳು, ಪ್ಲಾಸ್ಟಿಕ್ ಟ್ರೇಗಳು, ಸ್ವೀಟ್ ಬಾಕ್ಸ್ಗಳು, ಆಮಂತ್ರಣ ಪತ್ರಗಳು, ಸ್ವೀಟ್ ಪ್ಯಾಕೆಟ್ಗಳ ಸುತ್ತ ಸುತ್ತುವ ಪದರ ಅಥವಾ ಪ್ಯಾಕಿಂಗ್ ಫಿಲ್ಮ್ಗಳು ಮತ್ತು ಪ್ಲಾಸ್ಟಿಕ್ ಸ್ಟಿಕರ್ಗಳನ್ನು ಬಳಸದಂತೆ ಕ್ರಮವಹಿಸುವುದು ಎಂದು ತಿಳಿಸಿದರು.

 

 

 

 

 

 

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Zbierajte užitočné tipy a triky pre zlepšenie vášho každodenného života! Tu nájdete články o kuchynských trikoch, zdravom stravovaní a nápady pre pestovanie skvelých plodín vo vašej záhrade. Užite si užitočné rady a zábery z nášho zdroja! Ako Zodpovedá vášmu zvieračomu Sendviče sýrom, uhorkami a uzeným Jahňacie jazyky Hrubé lístkové Čerstvý Chrumkavá tartaletka s kyslou Ako pripraviť kotlety svojich Chrumkavý losos s čerstvým zeleným šalátom Palacinky