HomeKarnatakaBIG NEWS : ರಾಜ್ಯದ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಇಂದಿನಿಂದ ‘ಸಂವಿಧಾನ ಪೀಠಿಕೆ’ ಓದುವುದು ಕಡ್ಡಾಯ

BIG NEWS : ರಾಜ್ಯದ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಇಂದಿನಿಂದ ‘ಸಂವಿಧಾನ ಪೀಠಿಕೆ’ ಓದುವುದು ಕಡ್ಡಾಯ

ಬೆಂಗಳೂರು : (ಸೆ.15)  ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಇಂದಿನಿಂದ ವಿದ್ಯಾರ್ಥಿಗಳು ‘ಸಂವಿಧಾನ ಪೀಠಿಕೆ’ ಓದುವುದು ಕಡ್ಡಾಯವಾಗಿದೆ.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಇಂದು ವಿಧಾನಸೌಧ ಮುಂಭಾಗ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪದವಿ ಕಾಲೇಜುಗಳಲ್ಲಿ ಭಾರತದ ಸಂವಿಧಾನ ಪೀಠಿಕೆಯನ್ನು ಫಲಕದಲ್ಲಿ ಅವಳಡಿಸಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿತ್ತು. ಅದರಂತೆ ಇಂದಿನಿಂದ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಓದು ಆರಂಭಗೊಳ್ಳಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಮೂಲಭೂತ ಕರ್ತವ್ಯಗಳನ್ನು ಯಾರೂ ಪಾಲಿಸುತ್ತಿಲ್ಲ. ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮವನ್ನು ಮಕ್ಕಳಲ್ಲಿ ಸಂವಿಧಾನದ ಉದ್ದೇಶ ಅರ್ಥ ಆಗಬೇಕು ಎಂಬ ಹಿನ್ನೆಲೆಯಲ್ಲಿ ಆಂದೋಲನದ ರೀತಿ ಆಯೋಜಿಸಲಾಗುತ್ತಿದೆ.

ರಾಜ್ಯದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಾರ್ಥನಾ ಸಮಯದಲ್ಲಿ ಸಂವಿಧಾನ ಪೀಠಿಕೆಯನ್ನು ಓದುವುದು ಹಾಗೂ ಎಲ್ಲರೂ ಸಂವಿಧಾನದ ಪೀಠಿಕೆಗೆ ಬದ್ಧರಾಗುವುದು, ಸಾಂವಿಧಾನಿಕ ತತ್ತ್ವಗಳನ್ನು ತಮ್ಮ ಜೀವನ ಹಾಗೂ ಕರ್ತವ್ಯಗಳಲ್ಲಿ ಅಳವಡಿಸಿಕೊಳ್ಳಲು ಪ್ರತಿಜ್ಞೆಗೈಯುವುದು ಕಡ್ಡಾಯವಾಗಿದೆ ಎಂದು ಸರ್ಕಾರ ಆದೇಶಿಸಿದೆ.

ಸೆ.15 ರಂದು ಓದಬೇಕಾದ ಸಂವಿಧಾನದ ಪೀಠಿಕೆ

ಸಂವಿಧಾನದ ಪೀಠಿಕೆಯಲ್ಲಿರುವ ಪ್ರತಿಯೊಂದು ಪದಗಳು, ವಾಕ್ಯ ಬಹಳಷ್ಟು ಮುಖ್ಯವಾಗಿದ್ದು, ಪ್ರತಿಯೊಂದಕ್ಕೂ ವಿಶೇಷ ಅರ್ಥವಿದೆ, ಇದರ ಮಹತ್ವವನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕಿದೆ. ಹೀಗಾಗಿ ಸೆ.15 ರಂದು ಬೆಳಿಗ್ಗೆ 10 ಗಂಟೆಗೆ ಎಲ್ಲರೂ ಸಂವಿಧಾನದ ಪೀಠಿಕೆಯಾದ, “ಭಾರತದ ಜನಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ, ಸಮಾಜವಾದೀ, ಸರ್ವಧರ್ಮ, ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ: ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ: ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ: ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ, ಅವರಲ್ಲಿ ಭ್ರಾತೃಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕವಾಗಿ ಸಂಕಲ್ಪ ಮಾಡಿದವರಾಗಿ: ನಮ್ಮ ಸಂವಿಧಾನ ಸಭೆಯಲ್ಲಿ 1949 ನೇ ಇಸವಿ ನವೆಂಬರ್ ತಿಂಗಳ ಇಪ್ಪತ್ತಾರನೇ ತಾರೀಖಾದ ಈ ದಿವಸ ಈ ಮೂಲಕ ಈ ಸಂವಿಧಾನವನ್ನು ಅಂಗೀಕರಿಸಿ, ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ” ಎಂಬುದಾಗಿ ಓದಿ ಪ್ರತಿಯೊಬ್ಬರೂ ಪ್ರತಿಜ್ಞಾ ವಿಧಿ ಸ್ವೀಕರಿಸಬೇಕು.

ಸಂವಿಧಾನ ಪೀಠಿಕೆ ಓದುವ ಉದ್ದೇಶ

ಸಂವಿಧಾನವು ಡಾ. ಅಂಬೇಡ್ಕರ್ ಅವರು ನಮಗೆ ನೀಡಿರುವ ಜ್ಞಾನ ದೀವಿಗೆ, ಸಮಾನತೆಯ ದೀವಿಗೆಯಾಗಿದೆ. ಹೀಗಾಗಿ ಸಂವಿಧಾನದ ಪೀಠಿಕೆ ಓದುವುದು ಮಹತ್ವವಾದ ಉದ್ದೇಶ ಹೊಂದಿದ್ದು, ಇದು ವಿದ್ಯಾರ್ಥಿಗಳು ತಮ್ಮ ರಾಷ್ಟ್ರ ನಿರ್ಮಿಸಿರುವ ಮೂಲಭೂತ ತತ್ವಗಳು, ಮೌಲ್ಯಗಳನ್ನು ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತದೆ.
ದಿನಾಂಕ:15.09.2023 ರಂದು ಬೆಳಿಗ್ಗೆ 10.00 ಗಂಟೆಗೆ ವಿಧಾನ ಸೌಧದ ಮುಂಭಾಗದ ವಿಶಾಲವಾದ ಮೆಟ್ಟಿಲುಗಳು ಮತ್ತು ಪ್ರದೇಶದಲ್ಲಿ ಸಿಎಂ ಸಿದ್ದರಾಮಯ್ಯ 10,000 ವಿದ್ಯಾರ್ಥಿಗಳೊಡನ ಭಾರತದ ಸಂವಿಧಾನ ಪೀಠಿಕೆಯನ್ನು ಓದಲಿದ್ದಾರೆ. ಈ ಹಿನ್ನೆಲೆ ಏಕಕಾಲದಲ್ಲಿ ಆನ್ ಲೈನ್ (Virtual) ಮೂಲಕ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮದಲ್ಲಿ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸುವ ಕುರಿತು ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿರುತ್ತದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular