HomeKarnatakaಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ನಗರದ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ( ಸೆ.15 & 16) ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸೆ.15 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಎಂ.ಆರ್.ಎಸ್ 110/11 ಕೆವಿ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಸೆ.15 ರ ಬೆಳಗ್ಗೆ 09-30 ರಿಂದ ಸಂಜೆ 05-00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಂ.ಆರ್.ಎಸ್ ವಾಟರ್ ಸಪ್ಲೇ, ಎಂ.ಆರ್.ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಜ್ಯೋತಿನಗರ, ವಿದ್ಯಾನಗರ, ಕಂಟ್ರಿ ಕ್ಲಬ್ ರಸ್ತೆ, ಚಿಕ್ಕಲ್, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಮತ್ತು ಬಿ.ಹೆಚ್ ರಸ್ತೆ, ನೆಹರು ರಸ್ತೆ, ದುರ್ಗಿಗುಡಿ ಮುಖ್ಯ ರಸ್ತೆ, ಪಾರ್ಕ್ ಬಡಾವಣೆ, ತಿಲಕ್ ನಗರ, ಸರ್.ಎಂ.ವಿ ರಸ್ತೆ, ಬಾಲ್ರಾಜ್ ಅರಸ್ ರಸ್ತೆ, ಗಾಂಧಿ ಪಾರ್ಕ್, ಲೂರ್ದು ನಗರ, ಕಾನ್ವಂಟ್ ರಸ್ತೆ, ಬಾಪುಜಿ ನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್ ಬಡಾವಣೆ, ಟ್ಯಾಂಕ್ ಬೌಂಡ್ ರಸ್ತೆ ಹಾಗೂ ಮೀನಾಕ್ಷಿ ಭವನದ ಸುತ್ತಮುತ್ತಲಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ಸೆ.16 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಮೆಗ್ಗಾನ್ ವಿ.ವಿ ಕೇಂದ್ರದಲ್ಲಿ ತುರ್ತು ನಿರ್ವಹಣೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಸೆ.16 ರ ಬೆಳಗ್ಗೆ 11-30 ರಿಂದ ಮಧ್ಯಾಹ್ನ 02-00 ಗಂಟೆಯವರೆಗೆ ಬೆಳಗೂರು ಕಾಂಪ್ಲೇಕ್ಸ್, ದುರ್ಗಿಗುಡಿ 1 ಮತ್ತು 2ನೇ ಪ್ಯಾರಲಲ್ ರಸ್ತೆ, ಎಲ್.ಎಲ್.ಆರ್. ರಸ್ತೆಯಿಂದ ಶಿವಮೊಗ್ಗ ಡಯಾಗ್ನೋಸ್ಟಿಕ್ ಸೆಂಟರ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular