ಬೆಂಗಳೂರು : ಬಿಎಂಟಿಸಿಯಲ್ಲಿ ಖಾಲಿ ಇರುವ 15 ಸಾವಿರ ಹುದ್ದೆಗಳ ಭರ್ತಿಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭರವಸೆ ನೀಡಿದರು.
ಬೆಂಗಳೂರು ಕೆಂಗೇರಿ ಉಪನಗರದಲ್ಲಿ ನಿರ್ಮಾಣವಾಗುತ್ತಿರುವ ನೂತನ ಬಸ್ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
ಬಿಎಂಟಿಸಿಯಲ್ಲಿ ಖಾಲಿ ಇರುವ ವಿವಿಧ 15 ಸಾವಿರ ಹುದ್ದೆಗಳ ಭರ್ತಿ ಮಾಡುತ್ತೇವೆ. ಶೀಘ್ರದಲ್ಲೇ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದರು. ಬಸ್ ಗಳ ಕೊರತೆ ಇರುವ ಕ್ಷೇತ್ರಗಳಲ್ಲಿ ಹೆಚ್ಚುವರಿ ಬಸ್ ಬಿಡುತ್ತೇವೆ. ಗೌರಿ ಗಣೇಶ ಹಬ್ಬದ ಹಿನ್ನೆಲೆ ವಿವಿಧ ಊರುಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗುತ್ತದೆ ಎಂದರು.