ಬೆಂಗಳೂರು : ದೌರ್ಜನ್ಯ, ವಂಚನೆ ಮತ್ತು ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಸುಧಾಕರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಪ್ರಕರಣ ರದ್ದು ಕೋರಿ ಡಿ ಸುಧಾಕರ್ ಅರ್ಜಿ ಸಲ್ಲಿಸಿದ್ದರು. ವಿಚಾರ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಸರ್ಕಾರಕ್ಕೆ ತುರ್ತು ನೋಟಿಸ್ ನೀಡಿದೆ. ಹಾಗೂ ಈ ವಿಚಾರಣೆಯನ್ನು ಅಕ್ಟೋಬರ್ 3 ಕ್ಕೆ ಮುಂದೂಡಿದೆ.
ದೌರ್ಜನ್ಯ, ವಂಚನೆ ಮತ್ತು ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಸುಬ್ಬಮ್ಮ ಎಂಬವರು ಯಲಹಂಕ ಠಾಣೆಯಲ್ಲಿ ಸಚಿವರ ವಿರುದ್ಧ ದೂರು ದಾಖಲು ಮಾಡಿದ್ದು, ದೌರ್ಜನ್ಯ, ವಂಚನೆ ಮತ್ತು ಹಲ್ಲೆ ಆರೋಪದಡಿ ಅಟ್ರಾಸಿಟಿ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ದಲಿತರ ಆಸ್ತಿ ಕಬಳಿಕೆ ಆರೋಪವನ್ನು ಮಹಿಳೆ ಮಾಡಿದ್ದು, ಸೆವೆನ್ ಹಿಲ್ಸ್ ಡೆವಲಪರ್ಸ್ & ಟ್ರೇಡರ್ಸ್ ಪಾಲುದಾರ ಸುಧಾಕರ್ ಅವರು ತನ್ನ ಕುಟುಂಬದವರಿಂದ ಮೋಸದಿಂದ ಆಸ್ತಿ ಕಬಳಿಕೆ ಮಾಡಿಕೊಂಡಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದರು. ಯಲಹಂಕ ಠಾಣೆಯಲ್ಲಿ ಸಚಿವರ ವಿರುದ್ಧ ದೂರು ದಾಖಲು ಮಾಡಿದ್ದರು. ಪ್ರಕರಣ ರದ್ದು ಕೋರಿ ಸಚಿವ ಡಿ ಸುಧಾಕರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.