HomeIndiaBIG NEWS: ಲಿಫ್ಟ್ ಕುಸಿದು ಬಿದ್ದು ದುರಂತ; ನಾಲ್ವರು ಸಾವು; ಐವರ ಸ್ಥಿತಿ ಗಂಭೀರ

BIG NEWS: ಲಿಫ್ಟ್ ಕುಸಿದು ಬಿದ್ದು ದುರಂತ; ನಾಲ್ವರು ಸಾವು; ಐವರ ಸ್ಥಿತಿ ಗಂಭೀರ

ನೊಯ್ಡಾ: ನಿರ್ಮಾಣ ಹಂತದ ಕಟ್ಟಡದಲ್ಲಿ ಏಕಾಏಕಿ ಲಿಫ್ಟ್ ಕುಸಿದು ಬಿದ್ದು ನಾಲ್ವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ.

ಗ್ರೇಟರ್ ನೊಯ್ಡಾದಲ್ಲಿ ಈ ದುರಂತ ಸಂಭವಿಸಿದೆ. ಘನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ಕೂಲಿ ಕಾರ್ಮಿಕರು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ರೇಟರ್ ನೊಯ್ಡಾದ ವೆಸ್ಟ್ ನಲ್ಲಿ ಡ್ರೀಮ್ ವ್ಯಾಲಿ ಪ್ರಾಜೆಕ್ಟ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಸೈಟ್ ನಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ನಿರ್ಮಾಣ ಹಂತದ ಕಟ್ಟದಲ್ಲಿ ಇದ್ದಕ್ಕಿದ್ದಂತೆ ಲಿಫ್ಟ್ ಕುಸಿದು ಬಿದ್ದಿದೆ. ಘಟನೆಯಿಂದಾಗಿ ಕೆಲ ಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೃತರನ್ನು ಲಿಫ್ಟ್ ನಿಂದ ಹೊರತೆಗೆದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular