HomeKarnatakaBREAKING: ಮೆಡಿಸಿನ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಬೆಂಕಿ ಅವಘಡ

BREAKING: ಮೆಡಿಸಿನ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಬೆಂಕಿ ಅವಘಡ

ತುಮಕೂರು: ಮೆಡಿಸಿನ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಫ್ಯಾಕ್ಟರಿ ತುಂಬೆಲ್ಲ ಬೆಂಕಿ ಆವರಿಸಿರುವ ಘಟನೆ ತುಮಕೂರಿನ ವಸಂತನರಸಾಪುರದಲ್ಲಿ ನಡೆದಿದೆ.

ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿರುವ ವೀರೇಶ್ ಇಂಡಸ್ಟ್ರಿಯಲ್ ಫಾರ್ಮಾಸ್ಯೂಟಿಕಲ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಕೆಮಿಕಲ್ ಗಳು ಬೆಂಕಿಗಾಹುತಿಯಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಕಿಯ ಕೆನ್ನಾಲಿಗೆಗೆ ಫ್ಯಾಕ್ಟರಿ ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular