HomeCrimeನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ

ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಸಂಚಾರ ದಕ್ಷಿಣ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ್ (31) ಮೃತಪಟ್ಟವರಾಗಿದ್ದಾರೆ.

ಮೂಲತಃ ಗದಗಿನವರಾದ ಮಹೇಶ್ ಮತ್ತೋರ್ವ ಪೊಲೀಸ್ ಸಿಬ್ಬಂದಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಮಧ್ಯಾಹ್ನ ತಮ್ಮ ಕೋಣೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಮಹೇಶ್ ಅವರ ಮೃತ ದೇಹ ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬ ಸದಸ್ಯರು ಮಂಗಳೂರಿಗೆ ಆಗಮಿಸುತ್ತಿದ್ದು, ಮಹೇಶ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನೆಂಬುದು ತಿಳಿದು ಬಂದಿಲ್ಲ. ತನಿಖೆ ಬಳಿಕ ಸತ್ಯಾಂಶ ತಿಳಿದು ಬರಲಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular