HomeKarnatakaರಾಜ್ಯದ ಎಲ್ಲಾ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ: ಸಾರಿಗೆ ಇಲಾಖೆಯಲ್ಲಿ ನೋಂದಣಿ ಮಾಡಿ ಅಳವಡಿಸಿಕೊಳ್ಳಿ

ರಾಜ್ಯದ ಎಲ್ಲಾ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ: ಸಾರಿಗೆ ಇಲಾಖೆಯಲ್ಲಿ ನೋಂದಣಿ ಮಾಡಿ ಅಳವಡಿಸಿಕೊಳ್ಳಿ

ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ –HSRP ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ವಾಹನಗಳ ಮಾಲೀಕರು ಸಾರಿಗೆ ಇಲಾಖೆಯ ವೆಬ್ಸೈಟ್ನಲ್ಲಿ ನೋಂದಣಿ ಮಾಡಿಕೊಂಡು ಹೆಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯ ಮಾಡಲಾಗಿದೆ. ನವೆಂಬರ್ 17 ಈ ಪ್ರಕ್ರಿಯೆಗೆ ಕೊನೆಯ ದಿನವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲವು ಕಡೆ ನಕಲಿಯಾಗಿ HSRP ಅಳವಡಿಸುತ್ತಿದ್ದು, ಇದನ್ನು ತಡೆಯುವ ಉದ್ದೇಶದಿಂದ ಅಧಿಕೃತ HSRP ನಂಬರ್ ಪ್ಲೇಟ್ ಅಳವಡಿಸುವ ಪಟ್ಟಿಯನ್ನು ಸಾರಿಗೆ ಇಲಾಖೆ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.

www.transport.karnataka.gov.in ಅಥವಾ www.siam.in ವೆಬ್ಸೈಟ್ ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು. HSRP ಅಳವಡಿಸುವ ಡೀಲರ್ ಗಳ ಮಾಹಿತಿ ಲಭ್ಯವಾಗಲಿದ್ದು, ತಮಗೆ ಅನುಕೂಲವಾಗುವ ಸ್ಥಳದ ಆಯ್ಕೆ ಮಾಡಿಕೊಂಡು ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬಹುದು. HSRP ನಂಬರ್ ಪ್ಲೇಟ್ ಇಲ್ಲದಿದ್ದರೆ ವಾಹನ ಮಾರಿದರೆ ಅದರ ಮಾಲೀಕತ್ವ ಬದಲಾವಣೆ, ವಿಳಾಸ ಬದಲಾವಣೆ, ಅರ್ಹತಾ ಪತ್ರ, ನವೀಕರಣ ಮೊದಲಾದ ಸೇವೆ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular