ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಈದ್ಗಾ ಮೈದಾನದಲ್ಲಿ ಶುಕ್ರವಾರ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕುರಿತು ನಡೆದ ಚರ್ಚೆ, ವಿವಾದ, ಪ್ರತಿಭಟನೆ ನಡುವೆ ರಾಣಿ ಚನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳಿಗೆ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶವನ್ನು ಪಾಲಿಸಿ ಅನುಮತಿ ನೀಡಲಾಗಿದೆ. ಹೈಕೋರ್ಟ್ ನಿರ್ದೇಶನದಂತೆ ಅನುಮತಿ ನೀಡಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ತಿಳಿಸಿದ್ದಾರೆ.
ಈ ಸ್ಥಳದಲ್ಲಿ ಯಾವುದೇ ಆಚರಣೆಗಳಿಗೆ ಅನುಮತಿಯನ್ನು ತಡೆಹಿಡಿಯುವಂತೆ 20 ಕ್ಕೂ ಹೆಚ್ಚು ಸಂಘಟನೆಗಳು ನಾಗರಿಕ ಸಂಸ್ಥೆಯನ್ನು ಒತ್ತಾಯಿಸಿವೆ. ಹೈಕೋರ್ಟ್ ನಿರ್ದೇಶನದಂತೆ ಮೂರು ದಿನಗಳ ಕಾಲ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸಲು ನಮ್ಮ ನಿರ್ಣಯದಂತೆ ಅನುಮತಿ ನೀಡಿದ್ದೇವೆ ಎಂದು ಆಯುಕ್ತ ಈಶ್ವರ ಉಳ್ಳಾಗಡ್ಡಿ ತಿಳಿಸಿದರು.
ಉಳ್ಳಾಗಡ್ಡಿ ಅವರು ರಾಣಿ ಚನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳಿ ಅಧ್ಯಕ್ಷ ಸಂಜೀವ್ ಬಡಾಸ್ಕರ ಅವರಿಗೆ ಅನುಮತಿ ಪತ್ರ ನೀಡಿದರು. ಹುಬ್ಬಳ್ಳಿ-ಧಾರವಾಡದ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಕೆಲವು ಹಿಂದೂ ಸಂಘಟನೆಗಳಿಗೆ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರು ನೀಡಿರುವ ಅನುಮತಿಗೆ ತಡೆ ನೀಡುವಂತೆ ಕೋರಿ ಮುಸ್ಲಿಂ ಸಂಘಟನೆ ಅಂಜುಮನ್-ಎ-ಇಸ್ಲಾಂ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವ ನಿರ್ಣಯವನ್ನು ಅಂಗೀಕರಿಸಿದ ನಂತರ ಅಂಜುಮನ್-ಎ-ಇಸ್ಲಾಂ ನ್ಯಾಯಾಲಯದ ಮೊರೆ ಹೋಗಿತ್ತು.
ಆದರೆ, ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಪಾಲಿಕೆ ಆಯುಕ್ತರು ಅನುಮತಿ ನೀಡಿರಲಿಲ್ಲ. ವಿಶೇಷವೆಂದರೆ, ಕಳೆದ ವರ್ಷ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿತ್ತು.