HomeKarnatakaBIG NEWS: ಕೆಮ್ಮು, ಕಫದಿಂದ ಆಸ್ಪತ್ರೆಗೆ ದಾಖಲಾಗಿದ್ದ 6 ವರ್ಷದ ಬಾಲಕಿ ಸಾವು

BIG NEWS: ಕೆಮ್ಮು, ಕಫದಿಂದ ಆಸ್ಪತ್ರೆಗೆ ದಾಖಲಾಗಿದ್ದ 6 ವರ್ಷದ ಬಾಲಕಿ ಸಾವು

ಬೆಂಗಳೂರು: ಕೆಮ್ಮು, ಕಫದಿಂದ ಆಸ್ಪತ್ರೆಗೆ ದಾಖಲಾಗಿದ್ದ 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಆಕಾಶ್ ಆಸ್ಪತ್ರೆಯಲ್ಲಿ ನಡೆದಿದೆ.

ರಾಬಿಯಾ (6) ಮೃತ ಬಾಲಕಿ. ದೇವನಹಳ್ಳಿಯ ವಿಜಯಪುರದ ದಾದಾಫಿರ್ ನಜಿಯಾ ಬಾನು ದಂಪತಿಯ ಪುತ್ರಿ ರಾಬಿಯಾ ಕೆಮ್ಮು, ಕಫದಿಂದ ಬಳಲುತ್ತಿದ್ದಳು. ಈ ಹಿನ್ನೆಲೆಯಲ್ಲಿ ಬಾಲಕಿಯನ್ನು ಪೋಷಕರು ಆಕಾಶ್ ಆಸ್ಪತ್ರೆ ದಾಖಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂರು ದಿನ ಜನರಲ್ ವಾರ್ಡ್ ನಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗಿತ್ತು. ನಿನ್ನೆ ಸಂಜೆ ಬಾಲಕಿಯನ್ನು ಐಸಿಯುಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುಗೆ ಶಿಫ್ಟ್ ಆದ ಮೂರೇ ಗಂಟೆಯಲ್ಲಿ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಬಾಲಕಿ ಸಾವಿಗೆ ಕರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular