HomeKarnatakaಬೆಳ್ಳಂ ಬೆಳಗ್ಗೆ 'ರೈತರ ಆತ್ಮಹತ್ಯೆ' ವರದಿ ಓದಿ ಕಣ್ಣಾಲಿಗಳು ತುಂಬಿ ಬಂದವು : ಮಾಜಿ ಸಿಎಂ...

ಬೆಳ್ಳಂ ಬೆಳಗ್ಗೆ ‘ರೈತರ ಆತ್ಮಹತ್ಯೆ’ ವರದಿ ಓದಿ ಕಣ್ಣಾಲಿಗಳು ತುಂಬಿ ಬಂದವು : ಮಾಜಿ ಸಿಎಂ ‘HDK’ ಟ್ವೀಟ್

ಬೆಂಗಳೂರು : ಬೆಳ್ಳಂ ಬೆಳಗ್ಗೆಯೇ ರೈತರ ಆತ್ಮಹತ್ಯೆ ಸುದ್ದಿ ಓದಿ ಕಣ್ಣಾಲಿಗಳು ತುಂಬಿ ಬಂದವು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿದ ಮಾಜಿ ಸಿಎಂ ಹೆಚ್ಡಿಕೆ ಬೆಳ್ಳಂ ಬೆಳಗ್ಗೆಯೇ ಈ ವರದಿ ಓದಿದಾಕ್ಷಣ ಬಹಳ ಸಂಕಟವಾಯಿತು, ಕಣ್ಣಾಲಿಗಳು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕು. ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಸರಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ಇವರಿಗೆ ವಾಸ್ತವ ಅರಿವಿಲ್ಲವೆ? ಎಂದು  ಎಂದು ಹೆಚ್ಡಿಕೆ ಕಿಡಿಕಾರಿದ್ದಾರೆ.

ಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ ಸರಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ ‘ಕರ್ನಾಟಕ ಮಾದರಿ’? ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯಾ? ಅದು ಕೃಷಿ ಇಲಾಖೆಯಾ, ಕಸಾಯಿಖಾನೆಯಾ? ಕಂದಾಯಕ್ಕೂ ಆದಾಯದ ಚಿಂತೆಯಾ? ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ..!! ಎಂದಿದ್ದಾರೆ.
ಆಗಸ್ಟ್, ಸೆಪ್ಟೆಂಬರ್ ನಲ್ಲಿ ಕೆಲವೆಡೆ ಮಳೆಯಾದರೂ ಪ್ರಯೋಜನವಾಗಿಲ್ಲ. ಆಗ್ಗೆ ಬೆಳೆಗಳು ನಾಶವಾಗಿವೆ. ತುರ್ತಾಗಿ ಕೇಂದ್ರಕ್ಕೆ ಮನವಿ ಮಾಡಬೇಕಿದ್ದ ಸರಕಾರ ಮಾರ್ಗಸೂಚಿ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಕಾಲಹರಣವೂ ಜೀವಹರಣವೂ ಬೇರೆ ಬೇರೆ ಅಲ್ಲ. ತುರ್ತಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣ ಬಿಡುಗಡೆ ಮಾಡಬಹುದಲ್ಲವೇ?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳೆ ವಿಮೆಯೂ ಅನ್ನದಾತರ ಆಪತ್ತಿಗೆ ಆಗುತ್ತಿಲ್ಲ,ಅದರ ಬಗ್ಗೆ ಅವರಿಗೆ ವಿಶ್ವಾಸವೇ ಇಲ್ಲ. ಅವರು ಸಾವಿನ ದವಡೆಗೆ ಬೀಳುತ್ತಿದ್ದರೆ ಅಧಿಕಾರಿಗಳು ಅರ್ಹ-ಅನರ್ಹ ಸಾವು(!!) ಎಂದು ವಿಭಜಿಸಿ ಲೆಕ್ಕ ಹಾಕಿಕೊಂಡು ಕೂತಿದ್ದಾರೆ.ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಈ ಕ್ರೂರತೆಗೆ ಏನೆಂದು ಹೇಳುವುದು? ರೈತರ ಸಾವುಗಳೆಂದರೆ ಇವರಿಗೆ ಇಷ್ಟು ಹಗುರವೇ? ಎಂದಿದ್ದಾರೆ.

ನನ್ನ ಮನವಿ ಇಷ್ಟೇ; ರೈತರು ಎದೆಗುಂದಬಾರದು. ನಿಮ್ಮ ದುಡುಕಿನ ನಿರ್ಧಾರ ನಿಮ್ಮ ಕುಟುಂಬವನ್ನು ಅನಾಥಗೊಳಿಸುತ್ತದೆ, ನಿಮ್ಮೊಂದಿಗೆ ನಾನಿದ್ದೇನೆ. ಸರಕಾರ ಇಂಥಹ ಆತ್ಮಹತ್ಯೆ ಪ್ರಕರಣಗಳಿಗೆ ಇತಿಶ್ರೀ ಹಾಡಲೇಬೇಕು. ಶಾಶ್ವತವಾಗಿ ಪರಿಹಾರೋಪಾಯ ಕಂಡುಕೊಳ್ಳಬೇಕು. ಜೀವಬಿಟ್ಟ ರೈತ ಕುಟುಂಬಗಳಿಗೆ ಮಾನವೀಯತೆಯ ನೆರವು ಕೊಡಬೇಕು. ವಿಳಂಬ ಸರಿಯಲ್ಲ ಎಂದು ಕಿಡಿಕಾರಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular