HomeKarnatakaBIG NEWS: ಬೆಂಗಳೂರಿನಲ್ಲಿ 1.5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ; ಇಬ್ಬರು ವಿದೇಶಿ ಪ್ರಜೆಗಳು ಅರೆಸ್ಟ್

BIG NEWS: ಬೆಂಗಳೂರಿನಲ್ಲಿ 1.5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ; ಇಬ್ಬರು ವಿದೇಶಿ ಪ್ರಜೆಗಳು ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರು ಸಮರ ಮುಂದುವರೆಸಿದ್ದು, ಇದೀಗ ಬರೋಬ್ಬರಿ 1.5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ತಫಾ, ಎನಿಮೊ ಪೀಟರ್ ಎಂಬ ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ. ವಿದ್ಯಾರಣ್ಯಪುರದ ಮನೆಯೊಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರಣ್ಯಪುರದ ಮನೆಯಲ್ಲಿ ಆರೋಪಿಗಳು MDMA ಇಟ್ಟಿದ್ದರು. ಬಂಧಿತರಿಂದ 1.5 ಕೋಟಿ ಮೌಲ್ಯದ 1 ಕೆಜಿ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಬೆಂಗಳೂರಿನ ವಿವಿಧೆಡೆಗಳಲ್ಲಿ ಪ್ರಕರಣ ದಾಖಲಾಗಿದೆ.

ವರ್ತೂರು ಠಾಣೆಯಲ್ಲಿ 3, ಬನಶಂಕರಿ, ವಿದ್ಯಾರಣ್ಯಪುರ, ಕಾಟನ್ ಪೇಟೆ, ಕಾಡುಗೋಡಿ ಠಾಣೆಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular