HomeKarnatakaರಸ್ತೆ ಕ್ರಾಸ್ ಮಾಡುವಾಗ ದುರಂತ; ಕಾರು, ಬೈಕ್ ಭೀಕರ ಅಪಘಾತ; ಯುವತಿ ದುರ್ಮರಣ

ರಸ್ತೆ ಕ್ರಾಸ್ ಮಾಡುವಾಗ ದುರಂತ; ಕಾರು, ಬೈಕ್ ಭೀಕರ ಅಪಘಾತ; ಯುವತಿ ದುರ್ಮರಣ

ಮಂಗಳೂರು: ರಸ್ತೆ ಕ್ರಾಸ್ ಮಾಡುವಾಗ ಎಷ್ಟೇ ಜಾಗರೂಕರಾಗಿದ್ದರೂ ಕಡಿಮೆಯೆ. ರಸ್ತೆ ಕ್ರಾಸ್ ಮಾಡುವ ವೇಳೆ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಯುವತಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಕಾಸರಗೋಡು ಜಿಲ್ಲೆಯ ಬಾಕ್ರಬೈಲು ನಿವಾಸಿ ಪ್ರೀತಿಕಾ ಶೆಟ್ಟಿ (21) ಮೃತ ಯುವತಿ. ಬೈಕ್ ಸವಾರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಕಾರು ರಸ್ತೆ ಕ್ರಾಸ್ ಮಾಡುತ್ತಿದ್ದ ವೇಳೆ ಬೈಕ್ ಗೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಬೈಕ್ ನಲ್ಲಿದ್ದ ಯುವತಿ ರಸ್ತೆಗೆ ಬಿದ್ದಿದ್ದಾಳೆ. ಈ ವೇಳೆ ಯುವತಿಯ ತಲೆಗೆ ಗಂಭೀರವಾದ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾಳೆ.

ಮುಲ್ಕಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular