ಶಿವಮೊಗ್ಗ: ಸಚಿವ ಮಧು ಬಂಗಾರಪ್ಪರಿಂದ ಜೀವ ಬೆದರಿಕೆ ಇದೆ ಎಂಬ ಪ್ರಣವಾನಂದ ಸ್ವಾಮೀಜಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಮಧು ಬಂಗಾರಪ್ಪ, ಪ್ರಣವಾನಂದ ಇಂತಹ ಬುರುಡೆ ಬಿಟ್ಟುಕೊಂಡೇ ಬಂದಿದ್ದಾರೆ. ಅವರು ನಮ್ಮ ಸಮಾಜದವರೇ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರಣವಾನಂದಶ್ರೀ ಯಾಕೆ ಕಣ್ಣೀರು ಹಾಕಿದ್ದಾರೆ? ತಪ್ಪು ಮಾಡಿದ್ದಾರಾ? ಅವರು ಬರಿ ಬುರುಡೆ ಬಿಟ್ಟುಕೊಂಡು ಓಡಾಡುತ್ತಿದ್ದಾರೆ. ಅವರು ಈಡಿಗ ಸಮಾಜದವರಾ? ಅವರು ನಮ್ಮ ಸಮಾಜದವರೇ ಅಲ್ಲ. ಸಮುದಾಯದ ಹೆಸರನ್ನು ದುರ್ಬಳಕೆ ಮಡುತ್ತಿದ್ದಾರೆ. ಧಾರ್ಮಿಕ ಕ್ಷೇತ್ರದಲ್ಲಿದ್ದುಕೊಂಡು ಸುಳ್ಳು ಹೇಳಿಕೊಂಡು ಓಡಾಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
ನನ್ನ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷ್ನರ್, ಸ್ಪೀಕರ್, ಮಲ್ಲಿಕಾರ್ಜುನ ಖರ್ಗೆ ಸೇರಿ ಯಾರಿಗೆ ಬೇಕಾದರೂ ದೂರು ನೀಡಲಿ ಎಂದು ಗುಡುಗಿದ್ದಾರೆ.