ಖಾಸಗಿ, ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 23 ಹೊಸ ಸೈನಿಕ ಶಾಲೆಗಳ ಆರಂಭ

ನವದೆಹಲಿ: 23 ಹೊಸ ಸೈನಿಕ ಶಾಲೆಗಳನ್ನು ಆರಂಭಿಸಲು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅನುಮೋದಿಸಿದ್ದಾರೆ.

100 ಸೈನಿಕ ಶಾಲೆಗಳನ್ನು ಸ್ಥಾಪಿಸುವ ಪ್ರಧಾನಮಂತ್ರಿಯವರ ಆಶಯಕ್ಕೆ ಪೂರಕವಾಗಿ ಈ ಬೆಳವಣಿಗೆ ನಡೆದಿದೆ. ರಾಜನಾಥ್ ಸಿಂಗ್ ಇಂದು 23 ಹೊಸ ಸೈನಿಕ ಶಾಲೆಗಳನ್ನು ಪಾಲುದಾರಿಕೆ ಕ್ರಮ ಆರಂಭಿಸಲು ಅನುಮೋದನೆ ನೀಡಿದ್ದಾರೆ. ಈ ಉಪಕ್ರಮವು ಅಸ್ತಿತ್ವದಲ್ಲಿರುವ ಸೈನಿಕ ಶಾಲೆಗಳ ಹೊರತಾಗಿ ಸೈನಿಕ್ ಸ್ಕೂಲ್ ಸೊಸೈಟಿಯ ಆಶ್ರಯದಲ್ಲಿ ಪಾಲುದಾರಿಕೆಯ ಕ್ರಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊಸ ಸೈನಿಕ ಶಾಲೆಗಳ ಸಂಖ್ಯೆಯನ್ನು 42 ಕ್ಕೆ ಹೆಚ್ಚಿಸಿದೆ.

NGOಗಳು, ಖಾಸಗಿ ಶಾಲೆಗಳು ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ವರ್ಗವಾರು ಶ್ರೇಣಿಯ ರೀತಿಯಲ್ಲಿ 6 ನೇ ತರಗತಿಯಿಂದ ಪ್ರಾರಂಭವಾಗುವ 100 ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸುವ ಉಪಕ್ರಮವನ್ನು ಸರ್ಕಾರವು ಅನುಮೋದಿಸಿದೆ.

100 ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸುವ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಹಿಂದಿನ ಉದ್ದೇಶವು ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದಾಗಿದೆ. ಇದು ಸಶಸ್ತ್ರ ಪಡೆಗಳಿಗೆ ಸೇರುವುದು ಸೇರಿದಂತೆ ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಅವಕಾಶಗಳನ್ನು ನೀಡುತ್ತದೆ. ರಾಷ್ಟ್ರ ನಿರ್ಮಾಣದ ಕಡೆಗೆ ಸರ್ಕಾರದೊಂದಿಗೆ ಕೈಜೋಡಿಸಲು ಖಾಸಗಿ ವಲಯಕ್ಕೆ ಇದು ಅವಕಾಶವನ್ನು ನೀಡುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read